ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ…!

ಸೂರತ್‌ : ಕಾಂಗ್ರೆಸ್ ಅಭ್ಯರ್ಥಿಯನ್ನು ಚುನಾವಣಾಧಿಕಾರಿ ಅನರ್ಹಗೊಳಿಸಿದ್ದರಿಂದ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ನಂತರ ಗುಜರಾತಿನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 7 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಎರಡು ವಾರಗಳ ಮೊದಲು ಮುಖೇಶ ದಲಾಲ್ ಅವರನ್ನು ವಿಜಯಿ ಎಂದು ಘೋಷಿಸಲಾಯಿತು. … Continued

ಬಿಜೆಪಿಯಿಂದ ಕೆ.ಎಸ್‌. ಈಶ್ವರಪ್ಪ ಉಚ್ಚಾಟನೆ

ಬೆಂಗಳೂರು: ಶಿವಮೊಗ್ಗ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಸೋಮವಾರ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಈ ಬಗ್ಗೆ ಸೋಮವಾರ ಸಂಜೆ ರಾಜ್ಯ ಬಿಜೆಪಿ ಘಟಕದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದು, ಪಕ್ಷದ ಆದೇಶವನ್ನು ಉಲ್ಲಂಘಿಸಿ ನೀವು ಶಿವಮೊಗ್ಗದಿಂದ ಸ್ಪರ್ಧೆ ಮಾಡಿರುವುದು ಪಕ್ಷದ ಮುಜುಗರಕ್ಕೆ ಕಾರಣವಾಗಿದೆ. ಇದು ಪಕ್ಷದ ಶಿಸ್ತು … Continued

ಗದಗ: ನಾಲ್ವರು ಅಮಾಯಕರ ಕೊಲೆ ಪ್ರಕರಣ ಭೇದಿಸಿದ ಪೊಲೀಸರು, ತಂದೆ-ತಾಯಿ ಕೊಲೆಗೆ ಮಗನೇ ಸುಪಾರಿ ಕೊಟ್ಟಿದ್ದ…! 8 ಮಂದಿ ಬಂಧನ

ಗದಗ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಾಲ್ವರು ಅಮಾಯಕರ ಕೊಲೆ ಪ್ರಕರಣದ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ತಂದೆ-ತಾಯಿ ಕೊಲೆಗೆ ಸುಪಾರಿ ಕೊಟ್ಟಿದ್ದ ಹಿರಿಯ ಮಗ ಸೇರಿದಂತೆ ಒಟ್ಟು 8 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಗದಗ ಎಸ್​​ಪಿ ಬಿ.ಎಸ್. ನೇಮಗೌಡ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ. ಘಟನೆ ನಡೆದ 48 ಗಂಟೆಗಳ ಒಳಗಾಗಿಯೇ … Continued

ಸಿನಿಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿಗೆ ಗಾಯ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಮೈಸೂರಿನಲ್ಲಿ ‘ಬಘೀರ’ ಸಿನಿಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಅವರ ಕಾಲು ಮತ್ತು ಕೈಗೆ ಪೆಟ್ಟಾಗಿದ್ದು, ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೈಸೂರಿನಲ್ಲಿ ‘ಬಘೀರ’ ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಚಿತ್ರೀಕರಣದ ವೇಳೆ ಶ್ರೀಮುರಳಿ ಅವರಿಗೆ ಗಾಯವಾಗಿದೆ. ಎರಡು ದಿನಗಳ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ. … Continued

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ಹಸ್ತಾಂತರ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಕೆಲ ದಿನಗಳ ಹಿಂದೆ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ರಾಜ್ಯಾದ್ಯಂತ ಈ ಬಗ್ಗೆ ಭರಾಇ ಪ್ರತಿಭಟನೆಯಾಗಿತ್ತು. ಇದೀಗ ರಾಜ್ಯ … Continued

ಭಾರತದಲ್ಲಿತ್ತು 1000 ಕಿಲೋ ತೂಕದ ಜಗತ್ತಿನ ಅತಿದೊಡ್ಡ ಹಾವು ವಾಸುಕಿ..! ಅದರ ಪಳೆಯುಳಿಕೆ ಪತ್ತೆ…ಅದರ ಉದ್ದ ಎಷ್ಟು ಗೊತ್ತೆ..?

ನವದೆಹಲಿ: ಜಗತ್ತಿನ ಅತೀ ದೊಡ್ಡ ಹಾಗೂ ಭಾರೀ ಗಾತ್ರದ ಹಾವು (big snake) ಭಾರತದಲ್ಲಿ ಬದುಕಿತ್ತು ಎಂಬುದು ಸಂಶೋಧನೆಯಿಂದ ಗೊತ್ತಾಗಿದೆ. ಗುಜರಾತಿನಲ್ಲಿ ಪತ್ತೆಯಾದ ಪ್ರಾಚೀನ ಹಾವೊಂದರ ಪಳೆಯುಳಿಕೆಗಳು (follisls) ಅದು ಸುಮಾರು 50 ಅಡಿ ಉದ್ದ ಹಾಗೂ 1,000 ಕೆಜಿ ತೂಕವಿತ್ತು ಎಂಬುದನ್ನು ಸೂಚಿಸಿವೆ. ವಿಜ್ಞಾನಿಗಳು ಇದನ್ನು ‘ವಾಸುಕಿ ಇಂಡಿಕಸ್’ ಎಂದು ಹೆಸರಿಸಿದ್ದು, 2005 ರಲ್ಲಿ … Continued

ಬೆಳಗಾವಿ : ವಿವಾಹಿತ ಮಹಿಳೆ ಮತಾಂತರಕ್ಕೆ ಯತ್ನ ; ಇಬ್ಬರ ಬಂಧನ

ಬೆಳಗಾವಿ : 28ರ ಹರೆಯದ ವಿವಾಹಿತ ಮಹಿಳೆಯ ಅಶ್ಲೀಲ ಫೋಟೋ ಹಾಗೂ ವೀಡಿಯೊಗಳನ್ನು ವೈರಲ್‌ ಮಾಡುವುದಾಗಿ ಬೆದರಿಸಿ ಬ್ಲಾಕ್ ಮೇಲ್ ಮೂಲಕ ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯಿಸಿದ ಆರೋಪದಲ್ಲಿ ದಂಪತಿ ಸೇರಿದಂತೆ ಏಳು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕಿರಾಣಿ ಅಂಗಡಿ ಇಟ್ಟುಕೊಂಡು ಜೀವನ ಮಾಡುತ್ತಿದ್ದ ಮಹಿಳೆಯನ್ನು ಮತಾಂತರ ಮಾಡಲು ಯತ್ನಿಸಿದ್ದ ಆರೋಪದ ಮೇರೆಗೆ ರಫೀಕ್ ಬೇಪಾರಿ … Continued

ಬೆಳಗಾವಿ: ಅಕ್ರಮ ಗೋವು ಸಾಗಣೆ ಆರೋಪ ; ಲಾರಿ ಚಾಲಕನಿಗೆ ಥಳಿತ

ಬೆಳಗಾವಿ : ಬೆಳಗಾವಿ ಸುವರ್ಣ ವಿಧಾನಸೌಧ ಬಳಿ ಗೋವುಗಳನ್ನು ಕೊಂಡೊಯ್ಯುತ್ತಿದ್ದ ವಾಹನವನ್ನು ತಡೆದ ಹಿಂದೂಪರ ಸಂಘಟನೆ ಕಾರ್ಯಕರ್ತರು ಚಾಲಕನನ್ನು ತಡೆದು ಥಳಿಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರದಿಂದ ಹುಬ್ಬಳ್ಳಿ ಕಡೆಗೆ ಗೋವುಗಳನ್ನು ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಆಧರಿಸಿ  ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಲಾರಿಯನ್ನು ತಡೆದು ಚಾಲಕನನ್ನು ವಿಚಾರಿಸಿದ್ದಾರೆ. ಈ ಬಗ್ಗೆ … Continued

ಕತ್ತೆ…ಕತ್ತೆ ಎಂದು ಹಂಗಿಸಬೇಡಿ…; ಕತ್ತೆ ಸಾಕಣೆ ಮಾಡಿ ಲೀಟರಿಗೆ 5000 ರೂ.ನಂತೆ ಹಾಲು ಮಾರುತ್ತಿದ್ದಾನೆ ಈ ವ್ಯಕ್ತಿ…!

ಅಹಮದಾಬಾದ್: ಶತಮಾನಗಳಿಂದ, ಅವುಗಳನ್ನು ಗುರುತಿಸದೆ ವಿಡಂಬನೆಯ ರೂಪಕವಾಗಿ ಬಳಸಲಾಗುತ್ತಿದ್ದ ಕತ್ತೆಗೆ ಕೊನೆಗೂ ಬೆಲೆ ಬಂದಿದೆ. ಅದರ ಹಾಲು ಗೋವು, ಕುರಿ ಸೇರಿದಂತೆ ಇತರ ಪ್ರತಿಸ್ಪರ್ಧಿ ಪ್ರಾಣಿಗಳ ಹಾಲಿನ ಬೆಲೆಗಿಂತ 70 ಪಟ್ಟು ಹೆಚ್ಚು ದರದಲ್ಲಿ ಮಾರಾಟವಾಗುತ್ತಿದೆ….! ಗುಜರಾತಿನ ಧೀರೇನ್ ಸೋಲಂಕಿ ಅವರು ಪಟಾನ್ ಜಿಲ್ಲೆಯ ತಮ್ಮ ಗ್ರಾಮದಲ್ಲಿ 42 ಕತ್ತೆಗಳೊಂದಿಗೆ ಕತ್ತೆ ಸಾಕಣೆ ಕೇಂದ್ರವನ್ನು ಸ್ಥಾಪಿಸಿದ್ದಾರೆ … Continued