ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ಹಸ್ತಾಂತರ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.
ಕೆಲ ದಿನಗಳ ಹಿಂದೆ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ರಾಜ್ಯಾದ್ಯಂತ ಈ ಬಗ್ಗೆ ಭರಾಇ ಪ್ರತಿಭಟನೆಯಾಗಿತ್ತು. ಇದೀಗ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.
ಸಿಐಡಿಯ ಎಸ್ಪಿ ನೇತೃತ್ವದ ತಂಡ ಸೋಮವಾರ ಮಧ್ಯಾಹ್ನ ಹುಬ್ಬಳ್ಳಿಯತ್ತ ಹೊರಟಿದೆ. ಹುಬ್ಬಳ್ಳಿಯ ಪೊಲೀಸ್ ಠಾಣೆಗೂ ಭೇಟಿ ನೀಡಲಿರುವ ಸಿಐಡಿ ತಂಡ, ಪ್ರಕರಣದ ಕಡತಗಳನ್ನು ಸುಪರ್ದಿಗೆ ಪಡೆಯಲಿದೆ. ನೇಹಾ ಹಿರೇಮಠ ಅವರ ಪೋಷಕರು, ಶಿಕ್ಷಕರು, ಕುಟುಂಬಸ್ಥರು, ಸ್ನೇಹಿತರು ಹಾಗೂ ಇತರರನ್ನು ಸಿಐಡಿ ವಿಚಾರಣೆ ನಡೆಸುವ ಸಂಭವವಿದೆ.

ಏತನ್ಮಧ್ಯೆ ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಕೊಲೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಲಾಗುತ್ತದೆ ಹಾಗೂ ಪ್ರಕರಣದ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಸರ್ಕಾರ ನೇಹಾ ಕುಟುಂಬದ ಬೆಂಬಲಕ್ಕೆ ಇದೆ. ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಎಚ್.ಕೆ.ಪಾಟೀಲ, ಸಂತೋಷ ಲಾಡ್ ಅವರು ನೇಹಾ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ ಎಂದರು.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

ಜಾತ್ಯತೀತ ಶಕ್ತಿಗಳ ಮತ ವಿಭಜನೆ ಆಗದಂತೆ ತಡೆಯಲು ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಮನವಿ ಮಾಡಿದ್ದೇನೆ. ಅವರು ಸ್ಪಂದಿಸುವ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾಂಗ್ರೆಸ್‌ನಿಂದ ದೇಶದ ಭದ್ರತೆಗೆ ಅಪಾಯ ಎಂದು ಬಿಜೆಪಿ ಮಾಧ್ಯಮಗಳಿಗೆ ಕೊಟ್ಟಿರುವ ಜಾಹೀರಾತಿಗೆ ಪ್ರತಿಕ್ರಿಯಿಸಿದ ಅವರು, ‘ಮತಕ್ಕಾಗಿ ಕೋಮು ಧ್ರುವೀಕರಣದ ರಾಜಕೀಯ ಮಾಡುತ್ತಿರುವ ಬಿಜೆಪಿಯಿಂದಲೇ ದೇಶದ ಭದ್ರತೆಗೆ ಅಪಾಯವಿದೆ’ ಎಂದು ಹೇಳಿದರು.

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement