ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಫೋಕ್ಸೋ ಪ್ರಕರಣದಡಿ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾಮಠದ ಮುರುಘಾ ಶರಣರ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದ್ದು, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ಮುರುಘಾ ಶರಣರನ್ನು 4 ತಿಂಗಳ ಅವಧಿಗೆ ಜೈಲಿಗೆ ಕಳುಹಿಸಬೇಕು. ಈ ಅವಧಿಯೊಳಗೆ ಸಂತ್ರಸ್ತೆಯರು ಹಾಗೂ ಪೋಷಕರ ವಿಚಾರಣೆ ಮುಗಿಸಬೇಕು. ಒಂದು ವೇಳೆ ಪ್ರಕರಣದ ವಿಚಾರಣೆಯು ಮುಗಿಯದೇ ಇದ್ದಲ್ಲಿ ಜೈಲು ಶಿಕ್ಷೆಯ ಅವಧಿಯನ್ನು ಮತ್ತೆ ಎರಡು ತಿಂಗಳ ಕಾಲ ವಿಸ್ತರಣೆ ಮಾಡುವ ಕುರಿತು ಸುಪ್ರೀಂ ಕೋರ್ಟ್‌ ಗಮನಕ್ಕೆ ತರಬೇಕು ಎಂದು ಆದೇಶದಲ್ಲಿ ಹೇಳಿದೆ.

ಎಸ್​ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಶರಣರನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು.
ಬಳಿಕ ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಮುರುಘಾ ಶರಣರ ಜಾಮೀನು ರದ್ದು ಕೋರಿ ಏಕಾಂತಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಪ್ರಮುಖ ಸುದ್ದಿ :-   ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement