ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ಹುಬ್ಬಳ್ಳಿ : ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್‌ ನನ್ನು ಹುಬ್ಬಳ್ಳಿಯ ನ್ಯಾಯಾಲಯವು ಬುಧವಾರ ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ.
ಆರೋಪಿ ಫಯಾಜ್‌ನನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಒಂದನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ನಾಗೇಶ ನಾಯ್ಕ ನಡೆಸಿದರು. ನಂತರ ತನಿಖಾ ತಂಡದ ಕೋರಿಕೆಯಂತೆ ಆರೋಪಿ ಫಯಾಜ್‌ನನ್ನು ಆರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದೆ.
ನೇಹಾ ಅವರನ್ನು ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಆರೋಪಿ ಫಯಾಜ್‌ ಕಳೆದ ಗುರುವಾರ ಹಲವು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಇದನ್ನು ಆಧರಿಸಿ ನೇಹಾ ಸಂಬಂಧಿ ಗೀತಾ ಅವರು ನೀಡಿದ ದೂರಿನ ಅನ್ವಯ ವಿದ್ಯಾನಗರ ಠಾಣೆಯಲ್ಲಿ ಆರೋಪಿ ಫಯಾಜ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 302 ಮತ್ತು 506 ಅಡಿ ಪ್ರಕರಣ ದಾಖಲಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement