ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರದಿಂದ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ ಎಚ್ಚರಿಕೆ ನೀಡಿದ್ದು, ಜನರು ಬೆಳಗ್ಗೆ 11 ರಿಂದ ಸಂಜೆ 4 ರವರೆಗೆ ಆದಷ್ಟು ಹೊರಗೆ ಹೋಗಬೇಡಿ ಎಂದು ಸಲಹೆ ನೀಡಿದೆ. ಏಪ್ರಿಲ್‌ 26ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, … Continued

ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ಹುಬ್ಬಳ್ಳಿ: ಹತ್ಯೆಗೀಡಾದ ನೇಹಾ ಹಿರೇಮಠ (Neha Hiremath) ಮನೆಗೆ ಗುರುವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನೇಹಾ ತಂದೆ ನಿರಂಜನ ಹಿರೇಮಠ, ತಾಯಿ ಗೀತಾ ಹಿರೇಮಠ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ನಿಮ್ಮ ಕುಟುಂಬದ ಜೊತೆಗೆ ನಾವಿದ್ದೇವೆ ಅಂತ ಭರವಸೆ ನೀಡಿದರು. … Continued

ತಪ್ಪು ಮಾಹಿತಿ ನೀಡಲಾಗಿದೆ : ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಬಹಿರಂಗ ಪತ್ರ ಬರೆದ ಖರ್ಗೆ

ನವದೆಹಲಿ : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನಂತರ ನಡೆದಿರುವ ಭಾರೀ ಚರ್ಚೆಯ ನಡುವೆಯೇ ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯವರಿಗೆ ಪತ್ರ ಬರೆದಿದ್ದು, ನಮ್ಮ ನ್ಯಾಯ ಪತ್ರವನ್ನು ವಿವರಿಸಲು ನಿಮ್ಮನ್ನು ಖುದ್ದಾಗಿ ಭೇಟಿಯಾಗಲು ಸಮಯ ಕೊಡಿ ಎಂದು ಕೇಳಿದ್ದಾರೆ. ಕಾಂಗ್ರೆಸ್‌ ಮೇಲೆ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಸಂಪತ್ತು … Continued

‘ಅಕ್ರಮ’ ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ : ಮಹಾರಾಷ್ಟ್ರ ಸೈಬರ್ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್

ಮಹಾದೇವ ಆನ್‌ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಅಪ್ಲಿಕೇಶನ್‌ನ ಅಂಗಸಂಸ್ಥೆಯಾದ ಫೇರ್‌ಪ್ಲೇ ಅಪ್ಲಿಕೇಶನ್‌ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಆವೃತ್ತಿಯ ಅಕ್ರಮ ಪ್ರಸಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್ ಇಲಾಖೆ ಸಮನ್ಸ್ ನೀಡಿದೆ ಎಂದು ವರದಿಯಾಗಿದೆ. ವರದಿ ಪ್ರಕಾರ, ದಕ್ಷಿಣ ಭಾರತದ ಖ್ಯಾತ ತಾರೆ ತಮನ್ನಾಗೆ ಏಪ್ರಿಲ್ 29 … Continued

ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪದ ಹೊಟೇಲ್‌ ನಲ್ಲಿ ಬೆಂಕಿ ಅವಘಡ : 6 ಮಂದಿ ಸಾವು

ಪಾಟ್ನಾ : ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೊಟೇಲ್‌ನಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅವಘಡಲ್ಲಿ ಕನಿಷ್ಠ ಆರು ಜನರು ಸಾವಿಗೀಡಾಗಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೇಲ್ನೋಟಕ್ಕೆ, ಸಿಲಿಂಡರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಂತೆ ತೋರುತ್ತಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಬೆಂಕಿಯನ್ನು ನಂದಿಸಲಾಗಿದೆ. ಮೃತರಲ್ಲಿ ಮೂವರು ಪುರುಷರು ಹಾಗೂ ಮೂವರು … Continued

ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಯುವಕರು ಸಾವಿಗೀಡಾದ ಘಟನೆ ಬೆಂಗಳೂರಿನಲ್ಲಿ ಬುಧವಾರ (ಏಪ್ರಿಲ್‌ 25) ಮಧ್ಯಾಹ್ನ ನಡೆದಿದೆ. ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಮೂವರು ರೈಲಿಗೆ ಸಿಲುಕಿ ಮೃತಪಟ್ಟಿದ್ದು, ಇವರು ಆಂಧ್ರಪ್ರದೇಶದ ಮೂಲದ ಚಿತ್ತೂರಿನ ಮೂಲದವರು ಎಂದು ತಿಳಿದು ಬಂದಿದೆ. ಶಶಿಕುಮಾರ (23), ಲೋಕೇಶ (25) ಎಂಬ ಇಬ್ಬರು ಮೃತರನ್ನು ಗುರುತಿಸಲಾಗಿದೆ. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಮೂವರು … Continued

ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಏಪ್ರಿಲ್ 29 ರೊಳಗೆ ಉತ್ತರಿಸುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ನೋಟಿಸ್‌ ಜಾರಿ ಮಾಡಿದೆ. ಧರ್ಮ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಮತ್ತು ವಿಭಜನೆಯನ್ನು … Continued

ಪಾಕಿಸ್ತಾನದ 19 ವರ್ಷದ ಹುಡುಗಿಗೆ ಹೊಸ ಜೀವನ ನೀಡಿದ ‘ಭಾರತದ ಹೃದಯ’ ….!

ಈ ವರ್ಷದ ಆರಂಭದಲ್ಲಿ ನಿಧನರಾದ 69 ವರ್ಷದ ವ್ಯಕ್ತಿಯ ಹೃದಯವು ಭಾರತದ ಗಡಿಯಾಚೆ ಪಾಕಿಸ್ತಾನದಲ್ಲಿ ವಾಸಿಸುವುದನ್ನು ಮುಂದುವರಿಸುತ್ತದೆ. ಹತ್ತು ವರ್ಷಗಳಿಂದ ಹೃದ್ರೋಗದಿಂದ ಬಳಲುತ್ತಿದ್ದ ಪಾಕಿಸ್ತಾನದ ಕರಾಚಿಯ 19 ವರ್ಷದ ಆಯೇಷಾ ರಾಶನ್ ಎಂಬ ಯುವತಿ ಭಾರತೀಯನ ಹೃದಯದೊಂದಿಗೆ ಸಾಮಾನ್ಯ ಜೀವನ ನಡೆಸಲು ಸಿದ್ಧರಾಗಿದ್ದಾರೆ. ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ಆಯೇಷಾ ಯಶಸ್ವಿ ಹೃದಯ ಕಸಿ ಮಾಡಿಸಿಕೊಂಡಿದ್ದು, ಕಳೆದ … Continued

ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

ಪಾಟ್ನಾ : ಬಿಹಾರದ ಜನತಾ ದಳ ಯುನೈಟೆಡ್ (ಜೆಡಿಯು) ಯುವ ನಾಯಕನನ್ನು ಬುಧವಾರ ರಾತ್ರಿ ಪಾಟ್ನಾದಲ್ಲಿ ಅಪರಿಚಿತ ದಾಳಿಕೋರರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಡರಾತ್ರಿ ಸೌರಭ ಕುಮಾರ ತನ್ನ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಬೈಕ್ ನಲ್ಲಿ ಬಂದ ನಾಲ್ವರು ದಾಳಿಕೋರರು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬೈಕ್‌ನಲ್ಲಿ … Continued

ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಬೆಂಗಳೂರು: ಬಡಗು ತಿಟ್ಟು ಯಕ್ಷಗಾನದ ಖ್ಯಾತ ಭಾಗವತ, ಅಪಾರ ಅಭಿಮಾನಿಗಳನ್ನು ಹೊಂದಿರುವ ಸುಬ್ರಹ್ಮಣ್ಯ ಧಾರೇಶ್ವರ 67ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ಗುರುವಾರ (ಏ.25) ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಪುತ್ರನ ಮನೆಯಲ್ಲಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಬೆಳಗ್ಗೆ 4:30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ. … Continued