ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

ಪಾಟ್ನಾ : ಬಿಹಾರದ ಜನತಾ ದಳ ಯುನೈಟೆಡ್ (ಜೆಡಿಯು) ಯುವ ನಾಯಕನನ್ನು ಬುಧವಾರ ರಾತ್ರಿ ಪಾಟ್ನಾದಲ್ಲಿ ಅಪರಿಚಿತ ದಾಳಿಕೋರರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಡರಾತ್ರಿ ಸೌರಭ ಕುಮಾರ ತನ್ನ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಬೈಕ್ ನಲ್ಲಿ ಬಂದ ನಾಲ್ವರು ದಾಳಿಕೋರರು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಬೈಕ್‌ನಲ್ಲಿ ಬಂದ ಅಪರಿಚಿತ ನಾಲ್ವರು ಸೌರಭ ಅವರ ತಲೆಗೆ ಎರಡು ಗುಂಡು ಹಾರಿಸಿದ್ದು, ಅವರ ಸಹಚರ ಮುನ್ಮುನ್ ಕುಮಾರ ಅವರಿಗೆ ಮೂರು ಗುಂಡು ಹೊಡೆದಿದ್ದಾರೆ. ಸೌರಭ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಸೌರಭ್ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು, ಮುನ್ಮುನ್ ಅವರನ್ನು ಗಂಭೀರ ಸ್ಥಿತಿಯಲ್ಲಿ ದಾಖಲಿಸಲಾಯಿತು.

“ಆರತಕ್ಷತೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ ಮೋಟಾರು ಸೈಕಲ್‌ಗಳಲ್ಲಿ ಬಂದ ದಾಳಿಕೋರರು ಸೌರಭಕುಮಾರ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿಯೂ ಗಾಯಗೊಂಡಿದ್ದಾರೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಭರತ್ ಸೋನಿ ತಿಳಿಸಿದ್ದಾರೆ.
ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಗುಂಡು ತಗುಲಿದ ಪರಿಣಾಮ ಸೌರಭಕುಮಾರ ಮೃತಪಟ್ಟಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಕೀಯ ಮತ್ತು ವ್ಯಾಪಾರ ಸಂಬಂಧಗಳು ಸೇರಿದಂತೆ ಎಲ್ಲಾ ದೃಷ್ಟಿಕೋನಗಳನ್ನು ಅನ್ವೇಷಿಸುತ್ತಿದ್ದೇವೆ ಎಂದು ಎಸ್ಪಿ ಭರತ ಸೋನಿ ಹೇಳಿದ್ದಾರೆ.
ಘಟನೆಯ ನಂತರ, ಕೆರಳಿದ ಜೆಡಿಯು ಬೆಂಬಲಿಗರು ಸ್ಥಳದಲ್ಲಿ ಜಮಾಯಿಸಿ, ಹತ್ಯೆಯ ಬಗ್ಗೆ ಕಠಿಣ ಮತ್ತು ತ್ವರಿತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಚಲಾವಣೆಯಾದ ಒಟ್ಟು ಮತದ ಮಾಹಿತಿ 48 ಗಂಟೆಗಳಲ್ಲಿ ಏಕೆ ವೆಬ್‌ಸೈಟ್‌ನಲ್ಲಿ ಹಾಕುತ್ತಿಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement