ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಏಪ್ರಿಲ್ 29 ರೊಳಗೆ ಉತ್ತರಿಸುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ನೋಟಿಸ್‌ ಜಾರಿ ಮಾಡಿದೆ.
ಧರ್ಮ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಮತ್ತು ವಿಭಜನೆಯನ್ನು ಉಂಟು ಮಾಡುವ ಆರೋಪಗಳ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿದ್ದವು. ಈ ದೂರುಗಳ ಆಧಾರದ ಮೇಲೆ ಸ್ಪಷ್ಟನೆ ಕೇಳಿದ ಆಯೋಗ, ಏಪ್ರಿಲ್ 29 ರಂದು ಬೆಳಗ್ಗೆ 11 ಗಂಟೆಯೊಳಗೆ ಉತ್ತರಿಸುವಂತೆ ಬಿಜೆಪಿ ಮತ್ತು ಕಾಂಗ್ರೆಸ್‍ಗೆ ಸೂಚಿಸಿದೆ.

ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳು, ವಿಶೇಷವಾಗಿ ಸ್ಟಾರ್ ಪ್ರಚಾರಕರ ನಡವಳಿಕೆ ಬಗ್ಗೆ ಹೆಚ್ಚಿನ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಉನ್ನತ ಹುದ್ದೆಯಲ್ಲಿರುವವರ ಪ್ರಚಾರ ಭಾಷಣಗಳು ಹೆಚ್ಚು ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತವೆ. ಮೊದಲ ಹಂತವಾಗಿ ಪಕ್ಷದ ಅಧ್ಯಕ್ಷರನ್ನು ಇದಕ್ಕೆ ಜವಾಬ್ದಾರರನ್ನಾಗಿ ಮಾಡುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.
ಏಪ್ರಿಲ್ 21 ರಂದು ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು

ಪ್ರಮುಖ ಸುದ್ದಿ :-   ಚಲಾವಣೆಯಾದ ಒಟ್ಟು ಮತದ ಮಾಹಿತಿ 48 ಗಂಟೆಗಳಲ್ಲಿ ಏಕೆ ವೆಬ್‌ಸೈಟ್‌ನಲ್ಲಿ ಹಾಕುತ್ತಿಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

. ರ್ಯಾಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿದ್ದರು. ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದ ನಂತರದ ರ್ಯಾಲಿಗಳಲ್ಲಿ ಪ್ರಧಾನಿ ಆರೋಪಗಳನ್ನು ಪುನರುಚ್ಚರಿಸಿದ್ದಾರೆ.
ಮತ್ತೊಂದೆಡೆ ರಾಷ್ಟ್ರದಲ್ಲಿ ಬಡತನ ಹೆಚ್ಚಿದೆ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಭಾಷೆ ಮತ್ತು ಪ್ರದೇಶದ ಆಧಾರದ ಮೇಲೆ ಭಾರತದ ಉತ್ತರ ಮತ್ತು ದಕ್ಷಿಣದ ನಡುವೆ ವಿಭಜನೆಯನ್ನು ರಾಹುಲ್ ಗಾಂಧಿ ಮುಂದುವರೆಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement