ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿ, ಇವಿಎಂಗೆ ಹಾನಿ ಮಾಡಲಾಗಿದೆ ಎಂದು ವರದಿಯಾಗಿದೆ. ಕೆಲವು ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳು ಮತ್ತು ಗ್ರಾಮಸ್ಥರಿಗೆ ಗಾಯಗಳಾಗಿವೆ ಎನ್ನಲಾಗಿದೆ.
ಅರಣ್ಯದೊಳಗೆ ಇರುವ ಈ ಗ್ರಾಮದಲ್ಲಿ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ ಎಂದು ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರು. ಇಂಡಿಗನತ್ತ ಹಾಗೂ ಮೆಂದಾರೆ ಗ್ರಾಮದ ಮತಗಟ್ಟೆಯಲ್ಲಿ 528 ಮತದಾರಿದ್ದಾರೆ. ಅಧಿಕಾರಿಗಳು ಜನರ ಮನವೊಲಿಸಲು ಯತ್ನಿಸಿದ್ದರೂ ಶುಕ್ರವಾರ ಬೆಳಿಗ್ಗೆಯಿಂದ ಯಾರೂ ಮತಗಟ್ಟೆಯತ್ತ ಬಂದಿರಲಿಲ್ಲ.

ಇಂಡಿಗನತ್ತ ಗ್ರಾಮಸ್ಥರು ಮತದಾನಕ್ಕೆ ಬಾರದ ಕಾರಣ ಅಧಿಕಾರಿಗಳು ಮೆಂದಾರೆ ಗ್ರಾಮದಲ್ಲಿರುವ ಗಿರಿಜನರನ್ನು ಮನವೊಲಿಸಿ ಮತದಾನ ಮಾಡುವಂತೆ ಮನವೊಲಿಸಿದ್ದಾರೆ. ಹೀಗಾಗಿ ಕೆಲವರು ಬಂದು ಮತ ಚಲಾಯಿಸಿದ್ದಾರೆ
ಈ ವೇಳೆ ಇಡೀ ಗ್ರಾಮ ಮತದಾನ ಬಹಿಷ್ಕರಿಸಿದೆ ಎಂದು ಗ್ರಾಮದ ಒಂದು ಗುಂಪು ಜಗಳ ಮಾಡಿದೆ. ‘ ಜನರನ್ನು ಹೆದರಿಸಿ, ಬೆದರಿಸಿ ಮತ ಹಾಕಿಸುತ್ತಿದ್ದೀರಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪೊಲೀಸರು ಲಾಠಿಚಾರ್ಜ್‌ ಮಾಡಲು ಮುಂದಾಗಿದ್ದಾರೆ. ಆಗ ಗ್ರಾಮಸ್ಥರು ಮತಗಟ್ಟೆ ಮೇಲೆ ಕಲ್ಲಿನ ತೂರಾಟ ನಡೆಸಿದರು. ಅಲ್ಲದೆ, ಮತಗಟ್ಟೆಯ ಒಳಕ್ಕೆ ನುಗ್ಗಿ ಇವಿಎಂ ಹಾಗೂ ಇತರ ಪರಿಕರಗಳನ್ನು ಕೆಳಕ್ಕೆ ಎಸೆದು ಹಾನಿ ಮಾಡಿದ್ದಾರೆ. ಕಲ್ಲು ತೂರಾಟದಲ್ಲಿ ಪೊಲೀಸರು ಹಾಗೂ ಅಲ್ಲಿನ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಮೂಲಭೂತ ಸೌಕರ್ಯ ಕೊರತೆಯಿಂದ ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದರು. ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ್ದಾರೆ.

ಪ್ರಮುಖ ಸುದ್ದಿ :-   ಮೈಸೂರು: ಮಲಗಿದ್ದ ಸ್ಥಿತಿಯಲ್ಲೇ ಒಂದೇ ಕುಟುಂಬದ ನಾಲ್ವರು ಸಾವು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement