ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬೆಂಗಳೂರಿನ ಮತಗಟ್ಟೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಮಹಿಳೆಯೊಬ್ಬರ ಜೀವ ಉಳಿದಿದೆ.
ಬೆಂಗಳೂರಿನಲ್ಲಿ ಮತದಾನ ಮಾಡಲು ಬಂದಾಗ ಹೃದಯಾಘಾತದಿಂದ ಕುಸಿದುಬಿದ್ದ ಮಹಿಳೆಗೆ ತ್ವರಿತಗತಿಯಲ್ಲಿ ವೈದ್ಯರು ಸ್ಪಂದಿಸಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನ ಜೆ.ಪಿ.ನಗರ 8ನೇ ಹಂತದ ಜಂಬೂಸವಾರಿ ದಿನ್ನೆಯಲ್ಲಿ ಮತದಾನ ಮಾಡಲು ಮಹಿಳೆ ಆಗಮಿಸಿದ್ದರು. ವೈದ್ಯರು ಸಹ ಮತದಾನಕ್ಕೆಂದು ಆಗಮಿಸಿದ್ದರು. ಮತದಾನ ಮಾಡಲು ಎಲ್ಲರಂತೆ 50 ವರ್ಷದ ಆಸುಪಾಸು ವಯಸ್ಸಿನ ಮಹಿಳೆ ಕಾಯುತ್ತಿದ್ದರು.ಮಹಿಳೆ ತಂದಿದ್ದ ಕ್ಯಾನಿನಲ್ಲಿ ನೀರು ಕುಡಿಯಲು ಮುಂದಾದರು. ಈ ವೇಳೆ ಅಸ್ವಸ್ಥರಾಗಿ ಕುಸಿದುಬಿದ್ದರು. ಶುಕ್ರವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಈ ವೇಳೆ ಅದೇ ಮತಗಟ್ಟೆಯಲ್ಲಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ.ಗಣೇಶ ಶ್ರೀನಿವಾಸ ಪ್ರಸಾದ ಅವರು ಧಾವಿಸಿದ್ದಾರೆ. ಈ ವೇಳೆ ವೈದ್ಯ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ ಅವರು, ಮಹಿಳೆಯ ನಾಡಿ ಮಿಡಿತ ಪರಿಶೀಲಿಸಿದ್ದಾರೆ. ಈ ವೇಳೆ ನಾಡಿಮಿಡಿ ತೀರಾ ಕಡಿಮೆ ಆಗಿದೆ. ಕಣ್ಣುಗಳನ್ನು ಮೇಲಕ್ಕೆ ಮಾಡಿದ್ದ ಮಹಿಳೆ ಯಾರಿಗೂ ಸ್ಪಂದಿಸಲಿಲ್ಲ.
ಆ ಮಹಿಳೆಗೆ ಉಸಿರುಗಟ್ಟುವ ಸ್ಥಿತಿಯಲ್ಲಿದ್ದದ್ದು ಕಂಡು ನಾನು ತಕ್ಷಣವೇ ಅವರಿಗೆ CPR (ಹೃದಯ ಶ್ವಾಸಕೋಶದ ಪುನರುಜ್ಜೀವನ) ಮಾಡಿದೆ. ಕೂಡಲೇ ಅವರ ದೇಹ ಸ್ಪಂದಿಸಿದ್ದು, ಅವರ ಆರೋಗ್ಯ ಮರಳಿ ಯಥಾಸ್ಥಿತಿಗೆ ಮರಳಿತು ಎಂದು ವೈದ್ಯರು ಮಾಹಿತಿ ನೀಡಿದರು.
ಮತಗಟ್ಟೆಯಲ್ಲಿ ನಿಯೋಜನೆಗೊಂಡಿದ್ದ ಚುನಾವಣಾ ಸಿಬ್ಬಂದಿ ಸಹಾಯಕ್ಕೆ ಧಾವಿಸಿದರು. ಮಹಿಳೆಗೆ ಜ್ಯೂಸ್ ನೀಡಿದರು. ಆಂಬ್ಯುಲೆನ್ಸ್ ಅನ್ನು ಕರೆಯಲಾಯಿತು. ಐದೇ ನಿಮಿಷದಲ್ಲಿ ಆಂಬುಲೆನ್ಸ್‌ನಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಪ್ರಮುಖ ಸುದ್ದಿ :-   ಅಶ್ಲೀಲ‌ ವೀಡಿಯೊ ಇಟ್ಟುಕೊಳ್ಳುವುದು ಅಪರಾಧ, ಡಿಲೀಟ್‌ ಮಾಡಿ : ಎಸ್‌ಐಟಿ ಮುಖ್ಯಸ್ಥರು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement