ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದ ಒಂದು ದಿನದ ನಂತರ, ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದೆ.
ಬಿಜೆಪಿಯ ಪ್ರಕಾರ, ಏಪ್ರಿಲ್ 2009 ರಲ್ಲಿ ಲೋಕಸಭಾ ಚುನಾವಣೆಯ ಪೂರ್ವದಲ್ಲಿ, ಅಂದಿನ ಪ್ರಧಾನಿ ಸಿಂಗ್ ಅವರು, “ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು, ಅವರು ಬಡವರಾಗಿದ್ದರೆ, ರಾಷ್ಟ್ರದ ಸಂಪನ್ಮೂಲಗಳ ಮೇಲೆ ಮೊದಲ ಆದ್ಯತೆ ಹೊಂದಿರುತ್ತಾರೆ ಎಂದು ಹೇಳಿರುವುದು ಈ ವೀಡಿಯೊದಲ್ಲಿದೆ.
ಭಾರತದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಆದ್ಯತೆ ಎಂಬ ತಮ್ಮ ಹಿಂದಿನ ಹೇಳಿಕೆಗೆ ಅವರು (ಮನಮೋಹನ್ ಸಿಂಗ್) ಬದ್ಧರಾಗಿರುವುದಾಗಿ ಹೇಳಿರುವುದು ಈ ವೀಡಿಯೊದಲ್ಲಿ ರೆಕಾರ್ಡ್‌ ಆಗಿದೆ ಎಂದು ಬಿಜೆಪಿ ಹೇಳಿದೆ.

ಮಾಜಿ ಪ್ರಧಾನಿಯವರ ಹೇಳಿಕೆಯನ್ನು ಆಧರಿಸಿದ ಬಿಜೆಪಿ, “ಮುಸ್ಲಿಮರಿಗೆ ಆದ್ಯತೆ ನೀಡುವುದು ಕಾಂಗ್ರೆಸ್ ಪಕ್ಷದ ಸ್ಪಷ್ಟ ನೀತಿ ಎಂಬ ನಮ್ಮ ಹೇಳಿಕೆಯನ್ನು ಈ ವೀಡಿಯೊ ಸಮರ್ಥಿಸುತ್ತದೆ. ಮೀಸಲಾತಿಯಿಂದ ಸಂಪನ್ಮೂಲಗಳವರೆಗೆ ಎಲ್ಲದರಲ್ಲೂ ಮುಸ್ಲಿಮರಿಗೆ ಆದ್ಯತೆ ನೀಡುವ ಕಾಂಗ್ರೆಸ್ ಮನಸ್ಥಿತಿಗೆ ಇದು ಮತ್ತಷ್ಟು ಪುರಾವೆಯಾಗಿದೆ ಎಂದು ಬಿಜೆಪಿ ಹೇಳಿದೆ.
ಮನಮೋಹನ್‌ ಸಿಂಗ್‌ ಅವರು, “ಸಂಪನ್ಮೂಲಗಳ ವಿಷಯದಲ್ಲಿ ಮುಸ್ಲಿಮರಿಗೆ ಆದ್ಯತೆ ಇರಬೇಕು ಎಂಬ ತಮ್ಮ ಹಿಂದಿನ ಪ್ರತಿಪಾದನೆಗೆ ತಾನು ಬದ್ಧನಾಗಿದ್ದೇನೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ” ಎಂದು ಬಿಜೆಪಿ ಹೇಳಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆಬದಿ ರೋಲ್‌ ಮಾರುವ 10 ವರ್ಷದ ಬಾಲಕನ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ; ಸ್ಫೂರ್ತಿಯೂ ಹೌದು; ಸಹಾಯ ಮಾಡುವೆ ಎಂದ ಆನಂದ ಮಹೀಂದ್ರಾ

ಮೀಸಲಾತಿಯಿಂದ ಸಂಪನ್ಮೂಲಗಳವರೆಗೆ ಎಲ್ಲದರಲ್ಲೂ ಮುಸ್ಲಿಮರಿಗೆ ಆದ್ಯತೆ ನೀಡುವ ಕಾಂಗ್ರೆಸ್ ಮನಸ್ಥಿತಿಗೆ ಈ ವೀಡಿಯೊ ಸಾಕ್ಷಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ಎರಡು ಪುಟಗಳ ಪತ್ರದಲ್ಲಿ, ಖರ್ಗೆ ಅವರು ಚುನಾವಣಾ ರ್ಯಾಲಿಗಳಲ್ಲಿ ಬಳಸುತ್ತಿರುವ ಭಾಷೆಯ ಬಗ್ಗೆ ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ಕಾಂಗ್ರೆಸ್ ಪ್ರಣಾಳಿಕೆಯ ವಾಸ್ತವಿಕತೆಯನ್ನು ವಿವರಿಸಲು ಭೇಟಿಯಾಗಲು ಸಮಯ ಕೋರಿದ್ದರು. ಇದರ ನಂತರ ಬಿಜೆಪಿ ಈ ವೀಡಿಯೊ ಹಂಚಿಕೊಂಡಿದೆ.

ಪ್ರಮುಖ ಸುದ್ದಿ :-   ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕೆ ವಿರೋಧ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಪಕ್ಷದ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement