ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

ಕಲಬುರಗಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಕಲಬುರಗಿಯ ರೈಲು ನಿಲ್ದಾಣದ ಬಳಿ ದಾಳಿ ನಡೆಸಿದ ಐಟಿ ಅಧಕಾರಿಗಳು ಎರಡು ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ವ್ಯಕ್ತಿಯೊಬ್ಬರು ರೈಲಿನಿಂದ ಇಳಿದು ಕಾರನ್ನು ಏರಿ ತೆರಳುವ ವೇಳೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಎರಡು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ವರದಿಯಾಗಿದೆ. ಸದ್ಯ … Continued

ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಮುಂಬೈ 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ವಾದಿಸಿದ್ದ ಉಜ್ವಲ್ ನಿಕಮ್ ಕಣಕ್ಕಿಳಿಸಿದ ಬಿಜೆಪಿ

ಮುಂಬೈ : ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ (ಏಪ್ರಿಲ್ 27) ಲೋಕಸಭೆ ಚುನಾವಣೆಗೆ ಮುಂಬೈ ಉತ್ತರ ಸೆಂಟ್ರಲ್ ಕ್ಷೇತ್ರದಿಂದ ಹಾಲಿ ಸಂಸದೆ ಪೂನಂ ಮಹಾಜನ್ ಅವರನ್ನು ಕೈಬಿಟ್ಟು ಪ್ರಮುಖ ಕಾನೂನು ವಿದ್ವಾಂಸ ಉಜ್ವಲ್ ನಿಕಮ್ ಅವರನ್ನು ಕಣಕ್ಕಿಳಿಸಿದೆ. ವಕೀಲ ಉಜ್ವಲ್ ನಿಕಮ್ ಅವರು 26/11 ಮುಂಬೈ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದಿಸಿದ್ದು … Continued

ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು…

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ನುಗ್ಗಿದ್ದ ಚಿರತೆಯನ್ನು ಕೊನೆಗೆ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯಲ್ಲಿರುವ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವಧಿಯಲ್ಲಿ ಅವಿತಿದ್ದ ಚಿರತೆಯನ್ನು ಕೊನೆಗೂ ಅರವಳಿಕೆ … Continued

ವೀಡಿಯೊ…| ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೆಲಿಕಾಪ್ಟರ್ ಹತ್ತುವಾಗ ಬಿದ್ದಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪಶ್ಚಿಮ ಬರ್ಧಮಾನದ ದುರ್ಗಾಪುರದಲ್ಲಿ ಹೆಲಿಕಾಪ್ಟರ್‌ ಏರಿ ಆಸನದಲ್ಲಿ ಕುಳಿತುಕೊಳ್ಳುವಾಗ ಜಾರಿ ಬಿದ್ದಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರ ಭದ್ರತಾ ಸಿಬ್ಬಂದಿ ಅವರಿಗೆ ಮೇಲೇಳಲು ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ. … Continued

ಕಾಂಗ್ರೆಸ್ಸಿಗೆ ಮುಸ್ಲಿಂ ಮತಗಳು ಬೇಕು, ಆದರೆ ಟಿಕೆಟ್‌ ಕೊಡಲ್ಲ : ಕಾಂಗ್ರೆಸ್‌ ಬಗ್ಗೆ ನಸೀಂ ಖಾನ್ ತೀವ್ರ ಅಸಮಾಧಾನ, ಹುದ್ದೆಗೆ ರಾಜೀನಾಮೆ

ನವದೆಹಲಿ: ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾನ್ ಅವರು ಪಕ್ಷದ ಪ್ರಚಾರ ಸಮಿತಿಗೆ ರಾಜೀನಾಮೆ ನೀಡಿದ್ದು ಮಹಾರಾಷ್ಟ್ರದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್‌ ಪಕ್ಷವು ಟಿಕೆಟ್‌ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಒಬ್ಬರೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಲೋಕಸಭೆ ಚುನಾವಣೆಗೆ … Continued

ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

ಮಂಗಳೂರು : ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ನಂತರ ಮದುವೆ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಶುಕ್ರವಾರ (ಏಪ್ರಿಲ್‌ 26) ನಡೆದಿದೆ ಎಂದು ವರದಿಯಾಗಿದೆ. ಕೊಣಾಲು ಗ್ರಾಮದ ಕೋಲ್ಪೆಯ ಉಮೇಶ ಎಂಬವರ ವಿವಾಹವು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ಸರಸ್ವತಿ … Continued

ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು : ಬರ ಪರಿಹಾರ ವಿಚಾರದಲ್ಲಿ ಕರ್ನಾಟಕ ಸರ್ಕಾರದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆದ ಬಳಿಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಅಲ್ಲದೆ, ತಮಿಳುನಾಡಿಗೆ 275 ಕೋಟಿ ರೂ. ನೆರೆ ಪರಿಹಾರವನ್ನು ಕೂಡ ಬಿಡುಗಡೆ ಮಾಡಿದೆ. ಕಳೆದ ವರ್ಷ ನೈರುತ್ಯ ಮಾನ್ಸೂನ್‌ ವಿಫಲವಾಗಿ ರಾಜ್ಯದಲ್ಲಿ ಭೀಕರ … Continued

ದಕ್ಷಿಣ ಭಾರತದಲ್ಲಿ ತೀವ್ರ ನೀರಿನ ಬಿಕ್ಕಟ್ಟು : 42 ಜಲಾಶಯದಲ್ಲಿ ಕೇವಲ 17%ರಷ್ಟು ನೀರಿನ ಸಂಗ್ರಹ ಮಾತ್ರ ಬಾಕಿ

ನವದೆಹಲಿ: ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳನ್ನು ಒಳಗೊಂಡಿರುವ ಭಾರತದ ದಕ್ಷಿಣ ಪ್ರದೇಶವು ಹತ್ತು ವರ್ಷಗಳ ಸರಾಸರಿಗೆ ಹೋಲಿಸಿದರೆ ಜಲಾಶಯದ ಸಾಮರ್ಥ್ಯದ ಕೇವಲ 17 ಪ್ರತಿಶತದಷ್ಟು ಮಾತ್ರ ನೀರಿನ ಸಂಗ್ರಹವಿದ್ದು, ಗಮನಾರ್ಹವಾಗಿ ಕಡಿಮೆಯಿದೆ ಎಂದು ಕೇಂದ್ರ ಜಲ ಆಯೋಗ(CWC)ದ ಇತ್ತೀಚಿನ ಬುಲೆಟಿನ್ ತಿಳಿಸಿದೆ. ಭಾರತದ ವಿವಿಧ ಪ್ರದೇಶಗಳಲ್ಲಿನ ಜಲಾಶಯದ ಶೇಖರಣಾ ಮಟ್ಟಗಳಿಗೆ ಸಂಬಂಧಿಸಿದಂತೆ … Continued

ಏಪ್ರಿಲ್‌ 30 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವೆಡೆ ಮಳೆ ಏಪ್ರಿಲ್‌ 30ರಿಂದ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐಎಂಡಿ ಪ್ರಕಾರ ಏಪ್ರಿಲ್‌ 27, 28 ಮತ್ತು 29ರಂದು ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ. ಏಪ್ರಿಲ್‌ 30 ರಿಂದ ಮೇ 3 ರವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಏಪ್ರಿಲ್‌ 30ರಂದು ಬೀದರ, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, … Continued

ಉತ್ತರ ಪತ್ರಿಕೆಗಳಲ್ಲಿ ಜೈ ಶ್ರೀ ರಾಮ, ಕ್ರಿಕೆಟ್‌ ಆಟಗಾರರ ಹೆಸರು ಬರೆದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣ ; ಇಬ್ಬರು ಪ್ರಾಧ್ಯಾಪಕರು ಅಮಾನತು

ನವದೆಹಲಿ: ಉತ್ತರ ಪ್ರದೇಶದ ಜೌನ್‌ಪುರದಲ್ಲಿರುವ ಸರ್ಕಾರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳಲ್ಲಿ ಸರಿಯಾಗಿ ಉತ್ತರ ಬರೆಯದೆ “ಜೈ ಶ್ರೀ ರಾಮ” ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದರೂ ಪರೀಕ್ಷೆಯಲ್ಲಿ ಅವರನ್ನು ಉತ್ತೀರ್ಣ ಮಾಡಿದ ಆರೋಪದ ಮೇಲೆ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ. ವರದಿ ಪ್ರಕಾರ, ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾನಿಲಯದ … Continued