ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

ಕಲಬುರಗಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಕಲಬುರಗಿಯ ರೈಲು ನಿಲ್ದಾಣದ ಬಳಿ ದಾಳಿ ನಡೆಸಿದ ಐಟಿ ಅಧಕಾರಿಗಳು ಎರಡು ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ.
ವ್ಯಕ್ತಿಯೊಬ್ಬರು ರೈಲಿನಿಂದ ಇಳಿದು ಕಾರನ್ನು ಏರಿ ತೆರಳುವ ವೇಳೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಎರಡು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ವರದಿಯಾಗಿದೆ. ಸದ್ಯ ನಗದು ಮತ್ತು ಕಾರನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಈ ಹಣಕ್ಕೆ ಸೂಕ್ತ ದಾಖಲೆ ಒದಗಿಸದ ಕಾರಣ ಕಾರಿನ ಸಮೇತ ಹಣವನ್ನು ಜಪ್ತಿ ಮಾಡಿದ್ದಾರೆ. ಹಣವನ್ನು ಯಾತಕ್ಕಾಗಿ ಸಾಗಾಟ ಮಾಡಲಾಗುತ್ತಿದ್ದು ಎನ್ನುವ ಬಗ್ಗೆ ವಿಚಾರಣೆ ನಡೆಯುತ್ತಿದೆ. ಈ ಕಾರು ಕಾಂಗ್ರೆಸ್ ಪಕ್ಷದ ಮಾಜಿ ಮೇಯರ್ ಒಬ್ಬರಿಗೆ ಸೇರಿದ ಕಾರು ಎಂದು ಹೇಳಲಾಗಿದೆ.

ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕ ವ್ಯಾಪ್ತಿಯ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ ನಡೆದ ಐಟಿ ದಾಳಿ ಮಹತ್ವ ಪಡೆದಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ಮೊನ್ನೆ ದಾಳಿ ನಡೆಸಿದ ವೇಳೆ ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಸುಧಾಕರ ಅವರ ಮೇಲೆ ಎಫ್ಐರ್ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ಬೆಳಗಾವಿ: ಮಗಳ ಮದುವೆ ಮಾಡಿಕೊಡಲು ಒಪ್ಪದ್ದಕ್ಕೆ ತಾಯಿ-ಮಗನನ್ನು ಭೀಕರವಾಗಿ ಕೊಲೆ ಮಾಡಿದ ಯುವಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement