ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು : ಬರ ಪರಿಹಾರ ವಿಚಾರದಲ್ಲಿ ಕರ್ನಾಟಕ ಸರ್ಕಾರದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆದ ಬಳಿಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಅಲ್ಲದೆ, ತಮಿಳುನಾಡಿಗೆ 275 ಕೋಟಿ ರೂ. ನೆರೆ ಪರಿಹಾರವನ್ನು ಕೂಡ ಬಿಡುಗಡೆ ಮಾಡಿದೆ.
ಕಳೆದ ವರ್ಷ ನೈರುತ್ಯ ಮಾನ್ಸೂನ್‌ ವಿಫಲವಾಗಿ ರಾಜ್ಯದಲ್ಲಿ ಭೀಕರ ಬರಗಾಲ ಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎನ್‌ಡಿಆರ್‌ಎಫ್‌ನಿಂದ 18,174 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರದ ಮುಂದೆ ಬೇಡಿಕೆ ಇಟ್ಟಿತ್ತು. ನಂತರ ಕೇಂದ್ರದ ತಂಡವೂ ರಾಜ್ಯಕ್ಕೆ ಆಗಮಿಸಿ ಬರ ಅಧ್ಯಯನ ನಡೆಸಿ ತೆರಳಿತ್ತು. ಆದರೆ, ಪರಿಹಾರ ಮಾತ್ರ ಬಿಡುಗಡೆಯಾಗಿರಲಿಲ್ಲ.

ಬರ ಪರಿಹಾರ ಬಿಡುಗಡೆ ಮಾಡುವಂತೆ ಕೋರಿ ರಾಜ್ಯ ಸರ್ಕಾರ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಆದರೆ, ಬಿಡುಗಡೆಯಾಗದ ಕಾರಣ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ತಾರತಮ್ಯ ಮಾಡುತ್ತಿದ್ದು, ಅನ್ಯಾಯ ಮಾಡುತ್ತಿದೆ ಎಂದು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿತ್ತು. ನಂತರ ರಾಜ್ಯ ಸರ್ಕಾರ ಬರ ಪರಿಹಾರ, ತೆರಿಗೆ ನ್ಯಾಯ ಮುಂದಿಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ನಡೆಸಿತ್ತು. ವಿಳಂಬವಾಗಿ ಮನವಿ ಸಲ್ಲಿಸಿದ್ದರಿಂದ ಪರಿಹಾರವಿಳಂಬವಾಗಿದೆ, ಇದರ ಹಿಂದೆ ಯಾವುದೇ ದುರುದ್ದೇಶವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿತ್ತು.

ಪ್ರಮುಖ ಸುದ್ದಿ :-   ಬೆಂಗಳೂರು: ಮದುವೆ ಮನೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಪಾನ್‌ ತಿಂದ ಬಾಲಕಿಯ ಹೊಟ್ಟೆಯಲ್ಲಿ ರಂಧ್ರ...!

ನಂತರ ಬರ ಪರಿಹಾರ ವಿಳಂಬದ ಕಾರಣ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ವೇಳೆ ಬರ ಪರಿಹಾರ ಬಿಡುಗಡೆಯ ಕುರಿತು ಒಂದು ವಾರದೊಳಗೆ ನಿರ್ಧರಿಸುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಅದರಂತೆ ಕೇಂದ್ರ ಸರ್ಕಾರ ಶನಿವಾರ 3,454 ಕೋಟಿ ರೂ. ಬರ ಪರಿಹಾರವನ್ನು ಕರ್ನಾಟಕಕ್ಕೆ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರದ ಹೋರಾಟಕ್ಕೆ ತಾರ್ಕಿಕವಾಗಿ ಜಯ ಸಿಕ್ಕಂತಾಗಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement