ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

ಮಂಗಳೂರು : ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ನಂತರ ಮದುವೆ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಶುಕ್ರವಾರ (ಏಪ್ರಿಲ್‌ 26) ನಡೆದಿದೆ ಎಂದು ವರದಿಯಾಗಿದೆ.
ಕೊಣಾಲು ಗ್ರಾಮದ ಕೋಲ್ಪೆಯ ಉಮೇಶ ಎಂಬವರ ವಿವಾಹವು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ಸರಸ್ವತಿ ಎಂಬವರ ಜೊತೆ ವಿವಾಹವು ಶುಕ್ರವಾರ ಬೆಳಗ್ಗೆ 11:35ರ ಮುಹೂರ್ತದಲ್ಲಿ ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ನಿಗದಿಯಾಗಿತ್ತು. ನಂತರದಲ್ಲಿ ಮಧ್ಯಾಹ್ನ 1 ಗಂಟೆಗೆ ವರನ ಮನೆಯಲ್ಲಿ ಸತ್ಕಾರ ಕೂಟ ನಿಗದಿಯಾಗಿತ್ತು.

ವರನ ಕಡೆಯವರು ದೇವಸ್ಥಾನಕ್ಕೆ ಮದುವೆ ದಿಬ್ಬಣದಲ್ಲಿ ಬಂದಿದ್ದರು. ಮದುವೆ ಮಂಟಪಕ್ಕೆ ಬಂದಿದ್ದ ವಧು ಹಾಗೂ ವರ ಪರಸ್ಪರ ಹೂಮಾಲೆ ಬದಲಾಯಿಸಿಕೊಂಡಿದ್ದರು. ಆದರೆ ವರ ತಾಳಿ ಕಟ್ಟಲು ಮುಂದಾಗುತ್ತಿದ್ದಂತೆ ವಧು ತನಗೆ ಈ ಮದುವೆ ನನಗೆ ಇಷ್ಟ ಇಲ್ಲ ಎಂದು ಹೇಳಿ ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದರು ಎಂದು ಎನ್ನಲಾಗಿದೆ.
ವರದಿ ಪ್ರಕಾರ, ಇದರಿಂದ ವಿಚಲಿತಗೊಂಡ ವಿಚಲಿತಗೊಂಡು ಹಿರಿಯರು ವಧುವಿನ ಮನವೊಲಿಕೆಗೆ ಮುಂದಾದರೂ ವಧು ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ.

ಪ್ರಮುಖ ಸುದ್ದಿ :-   ಮಂಗಳೂರು : ಮೊಬೈಲ್‌ ಫೋನ್‌ ವಿಚಾರಕ್ಕೆ ಜಗಳ ; ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ

ಬಳಿಕ ವರ ಹಾಗೂ ವಧುವಿನ ಕಡೆಯವರಿಬ್ಬರೂ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ತೆರಳಿದರು. ಪೊಲೀಸ್‌ ಠಾಣೆಯಲ್ಲಿ ನಡೆದ ಮಾತುಕತೆ ವೇಳೆ ವಧು ಸರಸ್ವತಿ ಆಗಿರುವ ಅಚಾತುರ್ಯ ಒಪ್ಪಿಕೊಂಡು ವರನನ್ನು ಮದುವೆ ಆಗಲು ಒಪ್ಪಿಗೆ ಸೂಚಿಸಿದರು. ಆದರೆ ಘಟನೆಯಿಂದ ನೊಂದಿದ್ದ ವರ ವಧುವನ್ನು ವರಿಸಲು ನಿರಾಕರಿಸಿದರೆಂದು ಹೇಳಲಾಗಿದೆ. ನಂತರ ಎರಡೂ ಕಡೆಯವರು ಠಾಣೆಯಲ್ಲಿ ಮುಚ್ಚಳಿಕೆ ಬರೆದುಕೊಟ್ಟು ಅಲ್ಲಿಂದ ತೆರಳಿದರು ಎಂದು ಹೇಳಲಾಗಿದೆ.

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement