ವೀಡಿಯೊ…| ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೆಲಿಕಾಪ್ಟರ್ ಹತ್ತುವಾಗ ಬಿದ್ದಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪಶ್ಚಿಮ ಬರ್ಧಮಾನದ ದುರ್ಗಾಪುರದಲ್ಲಿ ಹೆಲಿಕಾಪ್ಟರ್‌ ಏರಿ ಆಸನದಲ್ಲಿ ಕುಳಿತುಕೊಳ್ಳುವಾಗ ಜಾರಿ ಬಿದ್ದಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರ ಭದ್ರತಾ ಸಿಬ್ಬಂದಿ ಅವರಿಗೆ ಮೇಲೇಳಲು ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ. ಅವರು ತನ್ನ ಮುಂದಿನ ಅಸನ್ಸೋಲ್‌ಗೆ ಪ್ರಯಾಣ ಮುಂದುವರಿಸಿದ್ದಾರೆ.

ವೀಡಿಯೊ ದೃಶ್ಯಗಳು ಮಮತಾ ಬ್ಯಾನರ್ಜಿ ಅವರು ಸೀಟನ್ನು ಹಿಡಿಯಲು ಪ್ರಯತ್ನಿಸುತ್ತಿವಾಗ ಸಮತೋಲನವನ್ನು ಕಳೆದುಕೊಂಡು ಬೀಳುವುದನ್ನು ತೋರಿಸುತ್ತದೆ.
ಒಂದು ತಿಂಗಳ ಹಿಂದೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕೋಲ್ಕತ್ತಾದ ಕಾಳಿಘಾಟ್ ನಿವಾಸದಲ್ಲಿ ಬಿದ್ದು ಆಕೆಯ ಹಣೆಯ ಮೇಲೆ ಗಾಯಗೊಂಡಿದ್ದರು. 69 ವರ್ಷದ ನಾಯಕಿಯನ್ನು ಕೋಲ್ಕತ್ತಾದ ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಪ್ರಮುಖ ಸುದ್ದಿ :-   ಶಿರಸಿ: ಕಸ್ತೂರಿರಂಗನ್ ವರದಿಯಿಂದ ಉತ್ತರ ಕನ್ನಡ ಜಿಲ್ಲೆಯ 567 ಹಳ್ಳಿಗಳನ್ನು ಕೈಬಿಡಲು ಒತ್ತಾಯಿಸಿ ಸಹಸ್ರಾರು ಆಕ್ಷೇಪಣಾ ಪತ್ರ ಸಲ್ಲಿಕೆ

“ಅವರು ತಮ್ಮ ಡ್ರಾಯಿಂಗ್ ರೂಮಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಜಾರಿ ಕೆಳಗೆ ಬಿದ್ದರು ಮತ್ತು ಅವರ ತಲೆ ಗಾಜಿನ ಶೋಕೇಸ್‌ಗೆ ಬಡಿದಿದೆ. ಇದು ಅವರ ಹಣೆಯ ಮೇಲೆ ಆಳವಾದ ಗಾಯ ಮತ್ತು ಅಪಾರ ರಕ್ತಸ್ರಾವಕ್ಕೆ ಕಾರಣವಾಯಿತು ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದರು.
ಜನವರಿ 24 ರಂದು ಪೂರ್ವ ಬುರ್ದ್ವಾನ್ ಪ್ರವಾಸದ ಸಮಯದಲ್ಲಿ ಕಾರು ಅಪಘಾತ ಆಗುವುದನ್ನು ತಪ್ಪಿಸಿದರೂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement