ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

ನವದೆಹಲಿ : 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದಿದ್ದು, ಇತ್ತೀಚಿನ ಮಾಹಿತಿ ಪ್ರಕಾರ ಶೇ.63ರಷ್ಟು ಮತದಾನವಾಗಿದೆ. ಸಂಜೆ 6ರ ನಂತರವೂ ಹಲವಡೆ ಮತದಾರರು ಮತದಾನ ಕೇಂದ್ರದಲ್ಲಿ ಸರತಿಯ ಸಾಲಿನಲ್ಲಿ ನಿಂತಿದ್ದು ಹೀಗಾಗಿ ಅಂತಿಮ ಮತದಾನದ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಳವಾಗಬಹುದಾಗಿದೆ.
ಕೇರಳದಲ್ಲಿ 20, ಕರ್ನಾಟಕದಲ್ಲಿ 14, ರಾಜಸ್ಥಾನದಲ್ಲಿ 13, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ತಲಾ 8, ಮಧ್ಯಪ್ರದೇಶದಲ್ಲಿ 7, ಅಸ್ಸಾಂ ಮತ್ತು ಬಿಹಾರದಲ್ಲಿ ತಲಾ 5, ಬಂಗಾಳ ಮತ್ತು ಛತ್ತೀಸ್‌ಗಢದಲ್ಲಿ ತಲಾ 3 ಮತ್ತು ಜಮ್ಮು ಮತ್ತು ಕಾಶ್ಮೀರ, ಮಣಿಪುರ ಮತ್ತು ತ್ರಿಪುರದಲ್ಲಿ ತಲಾ1 ಸ್ಥಾನಗಳಿಗೆ ಎರಡನೇ ಹಂತದ ಮತದಾನ ನಡೆದಿದೆ.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ ತ್ರಿಪುರಾದಲ್ಲಿ ಶೇ.78.53ರಷ್ಟು ಮತದಾನವಾಗಿದೆ, ಮಣಿಪುರದಲ್ಲಿ 77.18ರಷ್ಟು ಮತದಾನವಾಗಿದೆ, ಉತ್ತರ ಪ್ರದೇಶದಲ್ಲಿ ಅತಿ ಕಡಿಮೆ ಶೇ.53.71 ಮತ್ತು ಮಹಾರಾಷ್ಟ್ರದಲ್ಲಿ ಶೇ.53.84ರಷ್ಟು ಮತದಾನವಾಗಿದೆ. ಉಳಿದಂತೆ ಪಶ್ಚಿಮ ಪಶ್ಚಿಮ ಬಂಗಾಳದಲ್ಲಿ ಶೇ.71.84, ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ.71.21ರಷ್ಟು, ಅಸ್ಸಾಂ ಶೇ.70.68,
ಕೇರಳ- ಶೇ.65.23, ಕರ್ನಾಟಕ ಶೇಕಡಾ 69.23, ಛತ್ತೀಸ್‌ಗಢ ಶೇ.73.05ರಷ್ಟು, ಮಧ್ಯಪ್ರದೇಶದಲ್ಲಿ ಶೇ.55.77ರಷ್ಟು ಹಾಗೂ ರಾಜಸ್ಥಾನದಲ್ಲಿ ಶೇ.62.46ರಷ್ಟು ಮತದಾನವಾಗಿದೆ.

ಪ್ರಮುಖ ಸುದ್ದಿ :-   ಸಿಬಿಐ ಜಂಟಿ ನಿರ್ದೇಶಕರಾಗಿ ಐವರು ಡಿಐಜಿಗಳನ್ನು ನೇಮಕ ಮಾಡಿದ ಕೇಂದ್ರ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement