ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಭಾನುವಾರ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ.
ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಎಸ್ ಐಟಿ ತಂಡ ರಚಿಚಿಸಿದೆ. ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿರುವ ಬಗ್ಗೆ ಮಾಹಿತಿ ಇದೆ. ಅವರಿಗೆ ನೊಟೀಸ್ ನೀಡಿ ಕರೆಸಿಕೊಳ್ಳುವ ಬಗ್ಗೆ ಹಿರಿಯ ಪೊಲೀಸ್ ತನಿಖಾಧಿಕಾರಿಗಳು ನಿರ್ಧರಿಸುತ್ತಾರೆ ಎಂದರು.
ಎಡಿಜಿಪಿ ಬಿ.ಕೆ ಸಿಂಗ್ ಅವರು ಈ ಹಿಂದೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಸ್ಐಟಿ ಮುಖ್ಯಸ್ಥರಾಗಿದ್ದರು. 3 ಎಸ್ ಪಿ, 4 ಡಿವೈಎಸ್ ಪಿ ಗಳನ್ನೊಳಗೊಂಡ ಎಸ್ಐಟಿ ರಚನೆಯಾಗಿದ್ದು, ಮೂವರಲ್ಲಿ ಇಬ್ಬರು ಮಹಿಳಾ ಅಧಿಕಾರಿಗಳು  ಇದ್ದಾರೆ ಎಂದು ತಿಳಿಸಿದ್ದಾರೆ. ಸಿಐಡಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದ ಎಸ್ ಐಟಿ ತಂಡದಲ್ಲಿ ಸಹಾಯಕ ಪೊಲೀಸ್ ಮಹಾ ನಿರ್ದೇಶಕಿ ಸುಮನ್ ಪೆನ್ನೇಕರ್ ಮತ್ತು ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಸೇರಿದಂತೆ ಮೂವರು ಎಸ್​​ಪಿ, ನಾಲ್ವರು ಡಿಸಿಪಿಗಳು ಇದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಲೋಕಸಭಾ ಚುನಾವಣೆ : ಮತಗಟ್ಟೆಯಲ್ಲಿ ಮತದಾರನ ಕೆನ್ನೆಗೆ ಬಾರಿಸಿದ ಶಾಸಕ ; ತಿರುಗಿ ಬಾರಿಸಿದ ಮತದಾರ...ಮುಂದಾಗಿದ್ದೇನೆಂದರೆ....

ಹಾಸನ ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಹಲವು ವೀಡಿಯೊಗಳು ಎರಡು ಮೂರು ಪೆನ್‌ಡ್ರೈವ್‌ಗಳಲ್ಲಿ ಹಾಸನ ಜಿಲ್ಲೆಯಾದ್ಯಂತ ಹರಿದಾಡುತ್ತಿವೆ ಎಂದು ಆರೋಪಿಸಲಾಗಿದೆ.
ಆದರೆ ಇದು ಮಾರ್ಫ್ ಮಾಡಲಾದ ವಿಡಿಯೋ ಎಂದು ಪ್ರಜ್ವಲ್ ರೇವಣ್ಣ ಪ್ರತಿಕ್ರಿಯಿಸಿದ್ದರು. ಆದರೆ ಇನ್ನೊಂದೆಡೆ ಇದು ರಾಜ್ಯ ಮಹಿಳಾ ಆಯೋಗದ ಕೈ ಸೇರಿತ್ತು. ಇದರ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ನಂತರ ಸಿದ್ದರಾಮಯ್ಯ ಈ ಬಗ್ಗೆ ಎಸ್‌ಐಟಿ ರಚಿಸುವುದಾಗಿ ಶನಿವಾರ ಪ್ರಕಟಿಸಿದ್ದರು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement