ಅಶ್ಲೀಲ ವಿಡಿಯೋ ಪ್ರಕರಣ : ಜೆಡಿಎಸ್‌ ನಿಂದ ಪ್ರಜ್ವಲ್‌ ರೇವಣ್ಣ ಅಮಾನತಿಗೆ ನಿರ್ಧಾರ

ಬೆಂಗಳೂರು/ ಶಿವಮೊಗ್ಗ : ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ  ಅಮಾನತು ಮಾಡಲಾಗಿದೆ. ದೇವೇಗೌಡ ಅವರ ಸೂಚನೆಯ ಮೇರೆ   ಲೆ ಜಾತ್ಯತೀತ ಜನತಾದಳವು ಈ ಕ್ರಮ ಕೈಗೊಂಡಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ .ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣನನ್ನು ಅಮಾನತು ಮಾಡಲಾಗಿದೆ, ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಿವಾದ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜಾ.ದಳ ಮೈತ್ರಿಗೆ ಹಿನ್ನಡೆಯಾಗಬಹುದು ಎನ್ನುವ ಆತಂಕದ ನಡುವೆಯೇ ಇನ್ನಷ್ಟ ಅನಾಹುತ ನಿಯಂತ್ರಿಸಲು ತುರ್ತು ಆದೇಶವನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.ಹುಬ್ಬಳ್ಳಿಯಲ್ಲಿ ಮಂಗಳವಾರ ನಡೆಯುವ ಕೋರ್‌ ಕಮಟಿ ಸಭೆಯಲ್ಲಿ ಈ ಬಗ್ಗೆ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಪ್ರಜ್ವಲ್‌ ರೇವಣ್ಣ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಅವರದ್ದೇ ಪಕ್ಷದ ಶಾಸಕ ಹಾಗೂ ಯುವ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಶರಣುಗೌಡ ಕಂದಕೂರ ಪತ್ರ ಬರೆದಿದ್ದರು. ಪಕ್ಷದ ಹಿತದೃಷ್ಟಿಯಿಂದ ಪ್ರಜ್ವಲ್‌ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

ಎಸ್‌ಐಟಿ ತನಿಖೆ ಚುರುಕು
ಹಾಸನದಲ್ಲಿ ಹಲವಾರು ಮಹಿಳೆಯರ ಮೇಲೆ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ದೂರುಗಳು ಕೇಳಿ ಬಂದಿದ್ದವು. ಈ ಬಗ್ಗೆ ದೂರು ಕೂಡ ದಾಖಲಾಗಿದ್ದು, ಹಾಸನ ಪೊಲೀಸರು ತನಿಖೆ ಆರಂಭಿಸಿದ್ದರು. ಮಹಿಳಾ ಆಯೋಗ ಈ ಕುರಿತು ಪತ್ರ ಬರೆದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿ ಎಸ್‌ಐಟಿ ತನಿಖೆಗೆ ಆದೇಶಿದೆ. ಹಿರಿಯ ಪೊಲೀಸ್‌ ಅಧಿಕಾರಿ ಬಿ.ಕೆ. ಸಿಂಗ್‌ ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿ ರಚಿಸಲಾಗಿದ್ದು, ಐಪಿಎಸ್‌ ಅಧಿಕಾರಿಗಳಾದ ಸೀಮಾ ಲಾಟ್ಕರ್‌ ಹಾಗೂ ಡಾ.ಸುಮನಾ ಪನ್ನೇಕರ್‌ ಅವರು ಸಮಿತಿಯಲ್ಲಿದ್ದಾರೆ. ಈ ತಂಡವೂ ಈಗಾಗಲೇ ತನಿಖೆ ಆರಂಭಿಸಿದೆ.

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement