ಲೈಂಗಿಕ ದೌರ್ಜನ್ಯದ ಆರೋಪ: ಎಚ್‌ಡಿ ರೇವಣ್ಣ , ಮಗ ಪ್ರಜ್ವಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎಂದು ಆರೋಪಿಸಲಾದ ಆಕ್ಷೇಪಾರ್ಹ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಎಚ್‌ಡಿ ರೇವಣ್ಣ ವಿರುದ್ಧವೂ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ಸಂತ್ರಸ್ತೆಯ ದೂರು ಆಧರಿಸಿ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಭಾನುವಾರ ಎಫ್‌ಐಆರ್‌ ದಾಖಲಿಸಲಾಗಿದೆ. ರೇವಣ್ಣ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡಿದ್ದು, ಪ್ರಜ್ವಲ್‌ ರೇವಣ್ಣ ಎರಡನೇ ಆರೋಪಿ ಎಂದು ಉಲ್ಲೇಖಿಸಲಾಗಿದೆ. ಹಲವಾರು ಮಹಿಳೆಯರ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಒಳಗೊಂಡಿರುವ ಪೆನ್ ಡ್ರೈವ್ ಹರಿದಾಡಿ ದೊಡ್ಡಮಟ್ಟದಲ್ಲಿ ಸುದ್ದಿಯಾಗಿದೆ. ಅದರ ಬೆನ್ನಲ್ಲೇ ತಂದೆ ಮತ್ತು ಮಗನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.

ಈ ವಿಡಿಯೊಗಳಿದ್ದ ಪೆನ್‌ಡ್ರೈವ್‌ಗಳನ್ನು ದೊಡ್ಡ ಸಂಖ್ಯೆಯಲ್ಲಿ ಸಾರ್ವಜನಿಕನಾಗಿ ಸಿಗುವಂತೆ ನೋಡಿಕೊಳ್ಳಲಾಗಿತ್ತು.
ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂಬ ಆಗ್ರಹ ಕೇಳಿಬಂದಿತ್ತು. ತನಿಖೆಯನ್ನು ಎಸ್‌ಐಟಿಗೆ ವಹಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು. ಸರ್ಕಾರ ಶನಿವಾರ ಎಸ್‌ಐಟಿ ರಚಿಸಲು ನಿರ್ಧರಿಸಿತ್ತು. ಭಾನುವಾರವೇ ರೇವಣ್ಣ, ಪ್ರಜ್ವಲ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಿಳೆಯ ಘನತೆಗೆ ಧಕ್ಕೆ ಆರೋಪ ಸೇರಿ ಹಲವು ಐಪಿಸಿ ಸೆಕ್ಷೆನ್ ಅಡಿ ಕೇಸ್ ದಾಖಲಾಗಿದೆ. ಐಪಿಸಿ ಸೆಕ್ಷೆನ್ 354 A, 354 D ಮತ್ತು 509 ಅಡಿಯಲ್ಲಿ ಈಗ ಪ್ರಕರಣ ದಾಖಲು ಮಾಡಲಾಗಿದೆ.

ಪ್ರಮುಖ ಸುದ್ದಿ :-   ಬೆಳಗಾವಿ: ಹಾಡಹಗಲೇ ಸ್ಕ್ರೂ ಡ್ರೈವರ್​ನಿಂದ ಚುಚ್ಚಿ ಯುವಕನ ಕೊಲೆ

2019ರಲ್ಲಿ ಎಚ್.ಡಿ.ರೇವಣ್ಣ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿ, ಮೂರೂವರೆ ವರ್ಷ ಕೆಲಸ ಮಾಡಿದ್ದೇನೆ. ಮನೆಯಲ್ಲಿ ಭವಾನಿ ರೇವಣ್ಣ ಇಲ್ಲದ ಸಮಯದಲ್ಲಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು’ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜ್ವಲ್‌ ರೇವಣ್ಣ ಸ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಮನೆಯಲ್ಲಿದ್ದಾಗ ವಿಡಿಯೊ ಕಾಲ್‌ ಮಾಡಿ, ನನ್ನ ಮಗಳ ಜೊತೆಗೆ ಅಸಭ್ಯವಾಗಿ ಮಾತನಾಡುತ್ತಿದ್ದರು. ಇದರಿಂದ ಹೆದರಿ ಅವರ ನಂಬರ್‌ ಬ್ಲಾಕ್‌ ಮಾಡಿದ್ದೆ. ಅಲ್ಲದೇ ಅವರ ಮನೆಯ ಕೆಲಸ ಬಿಟ್ಟು ಹೊರಬಂದಿದ್ದೆ’ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ಎಚ್‌.ಡಿ. ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ
ಕೆಲವು ಸಂಘಟನೆಗಳು ಮತ್ತು ನೊಂದ ಸಂತ್ರಸ್ತೆ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ದೂರಿನನ್ವಯ ರಾಜ್ಯ ಮಹಿಳಾ ಆಯೋಗ ತನಿಖೆಗೆ ವಿಶೇಷ ತಂಡ ರಚನೆ ಮಾಡಿ ಎಂದು ಮೂರು ದಿನಗಳ ಹಿಂದೆಯೇ ಪತ್ರ ಬರೆದಿತ್ತು. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ
ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು. ಇದರ ನಂತರ ಸರ್ಕಾರವು ಇದರ ತನಿಖೆಗೆ ಎಸ್‌ಐಟಿ ರಚಿಸಿ ಆದೇಶ ಹೊರಡಿಸಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement