ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ಅವರಿಗೆ ಎಸ್‌ಐಟಿ (ವಿಶೇಷ ತನಿಖಾದಳ) ನೋಟಿಸ್ ಜಾರಿ ಮಾಡಿದೆ ಹಾಗೂ ಮಾತ್ರವಲ್ಲದೇ 24 ಗಂಟೆಗಳಲ್ಲಿ ಹಾಜರಾಗಲು ಸೂಚನೆ ನೀಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಾದ ತಾವುಗಳು ಖುದ್ದು ಹಾಜರಾಗಿ ಹೇಳಿಕೆ ನೀಡಬೇಕಿದೆ. ಹೀಗಾಗಿ, ನೋಟೀಸ್ ತಲುಪಿದ 24 ಗಂಟೆಯ ಒಳಗೆ ಕಡ್ಡಾಯವಾಗಿ ಎಸ್‌ಐಟಿ ಮುಂದೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಪ್ರಜ್ವಲ್ ರೇವಣ್ಣ ಅವರು ಅನೇಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಹಲವು ವಿಡಿಯೋಗಳು ಬಹಿರಂಗವಾದ ನಂತರ ಹಾಸನ ಸಂಸದರ ವಿರುದ್ಧದ ಆರೋಪಗಳ ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಭಾನುವಾರ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅದಕ್ಕೆ ಸೂಚಿಸಲಾಗಿದೆ.
ಪ್ರಕರಣ ಸಂಬಂಧ ಎಡಿಜಿಪಿ-ಸಿಐಡಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಹೆಚ್ಚುವರಿ ಕಮಿಷನರ್ ಸುಮನ್ ಡಿ ಪೆನ್ನೇಕರ್ ಮತ್ತು ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಅವರನ್ನೊಳಗೊಂಡ ಎಸ್ಐಟಿ ತಂಡ ತನಿಖೆ ಆರಂಭಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ