ಬಾಬಾ ರಾಮದೇವ ಕಂಪನಿ ತಯಾರಿಸಿದ 14 ಔಷಧಗಳ ತಯಾರಿಕಾ ಪರವಾನಗಿ ಅಮಾನತು ಮಾಡಿದ ಉತ್ತರಾಖಂಡ ಸರ್ಕಾರ

ನವದೆಹಲಿ: ಉತ್ತರಾಖಂಡ ರಾಜ್ಯದ ಪರವಾನಗಿ ಪ್ರಾಧಿಕಾರವು ಬಾಬಾ ರಾಮದೇವ ಅವರ ಪತಂಜಲಿಯ ದಿವ್ಯ ಫಾರ್ಮಸಿಯ 14 ಉತ್ಪನ್ನಗಳ ಪರವಾನಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೋಮವಾರ ಅಮಾನತುಗೊಳಿಸಿದೆ.
ದಾರಿ ತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಪತಂಜಲಿಯ ದಿವ್ಯ ಫಾರ್ಮಸಿ ತಯಾರಿಸಿದ 14 ಉತ್ಪನ್ನಗಳ ಪರವಾನಗಿಯನ್ನು ಅಮಾನತುಗೊಳಿಸಿರುವುದಾಗಿ ಪರವಾನಗಿ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ.
ಉತ್ತರಾಖಂಡ ಸರ್ಕಾರವು ಏಪ್ರಿಲ್‌ 15ರಂದು ಈ ಅಮಾನತು ಆದೇಶ ಹೊರಡಿಸಿದೆ. ಅಸ್ತಮಾ, ಶ್ವಾಸನಾಳಗಳ ಒಳಪೊರೆಯ ಉರಿಯೂತ (ಬ್ರಾಂಕೈಟಿಸ್) ಮತ್ತು ಮಧುಮೇಹ ಔಷಧಿಗಳ ತಯಾರಿಕಾ ಪರವಾನಗಿಯನ್ನು ಅಮಾನತು ಮಾಡಲಾಗಿದೆ.

ಬಾಬಾ ರಾಮದೇವ ಮತ್ತು ಅವರ ಸಹವರ್ತಿ ಆಚಾರ್ಯ ಬಾಲಕೃಷ್ಣ ಅವರು ಪ್ರಕಟಿಸಿರುವ ಕ್ಷಮೆಯಾಚನೆಗೆ ಸಂಬಂಧಿಸಿದ ಪ್ರಕರಣವು ಏಪ್ರಿಲ್ 30 ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.
ಏಪ್ರಿಲ್ 16 ರಂದು, ರಾಮ್‌ದೇವ್ ಮತ್ತು ಬಾಲಕೃಷ್ಣ ಅವರು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ್ದಕ್ಕಾಗಿ ಮತ್ತು ಅಲೋಪತಿ ಔಷಧಿಗಳ ವಿರುದ್ಧ ಕಾಮೆಂಟ್‌ಗಳನ್ನು ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ಗೆ ಕ್ಷಮೆಯಾಚಿಸಿದರು ಮತ್ತು ರಾಮದೇವ “ಭವಿಷ್ಯದಲ್ಲಿ ಅದರ ಬಗ್ಗೆ ಜಾಗೃತರಾಗಿರುತ್ತೇನೆ” ಎಂದು ಭರವಸೆ ನೀಡಿದರು.
ತಪ್ಪುದಾರಿಗೆಳೆಯುವ ಜಾಹೀರಾತುಗಳ ಪ್ರಕರಣದಲ್ಲಿ ನಡೆಯುತ್ತಿರುವ ಮೊಕದ್ದಮೆಯಲ್ಲಿ ತನ್ನ ನಿರ್ದೇಶನಗಳನ್ನು ಅನುಸರಿಸದ ಕಾರಣ ಸುಪ್ರೀಂ ಕೋರ್ಟ್‌ನಿಂದ ಪದೇ ಪದೇ ಟೀಕೆಗೆ ಗುರಿಯಾಗಿರುವ ಯೋಗ ಗುರು ಬಾಬಾ ರಾಮದೇವಗೆ ಸರ್ಕಾರದ ಆದೇಶವು ಇತ್ತೀಚಿನ ಹಿನ್ನಡೆಯಾಗಿದೆ.

ಪ್ರಮುಖ ಸುದ್ದಿ :-   ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಆಪ್ತ ಸಹಾಯಕನ ವಿರುದ್ಧ ಎಫ್‌ಐಆರ್ ದಾಖಲು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement