ಮೇಕೆದಾಟು : ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಸಾವು

ರಾಮನಗರ : ಸೋಮವಾರ ರಾಮನಗರ ಜಿಲ್ಲೆಯ ಮೇಕೆದಾಟು ಬಳಿಯ ಕಾವೇರಿ ನದಿಯ ಸಂಗಮದಲ್ಲಿ ಮೂವರು ಯುವತಿಯರು ಸೇರಿದಂತೆ ಐವರು ವಿದ್ಯಾರ್ಥಿಗಳು ಮುಳುಗಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಮೃತ ವಿದ್ಯಾರ್ಥಿಗಳನ್ನು ಹರ್ಷಿತಾ (20), ಅಭಿಷೇಕ (20), ತೇಜಸ್ (21), ವರ್ಷ (20) ಮತ್ತು ಸ್ನೇಹಾ (19) ಎಂದು ಗುರುತಿಸಲಾಗಿದೆ. ಈಜುತ್ತಿದ್ದ ವೇಳೆ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾರೆ. ಇವರೆಲ್ಲರೂ ಬೆಂಗಳೂರಿನ  ಕಾಲೇಜು ವಿದ್ಯಾರ್ಥಿಗಳು ಎಂದು ಹೇಳಲಾಗಿದೆ.
ವಿದ್ಯಾರ್ಥಿಗಳು ಮಧ್ಯಾಹ್ನ ಈಜಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟುವಿಗೆ 12 ವಿದ್ಯಾರ್ಥಿಗಳ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶವವನ್ನು ಹೊರಕ್ಕೆ ತೆಗೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
“ಸೋಮವಾರ ಮಧ್ಯಾಹ್ನ ಸಾತ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ. ಹನ್ನೆರಡು ವಿದ್ಯಾರ್ಥಿಗಳು ಸಂಗಮಕ್ಕೆ ಪ್ರವಾಸಕ್ಕೆ ತೆರಳಿದ್ದರು ಮತ್ತು ದುರದೃಷ್ಟವಶಾತ್ ಐವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದಾರೆ ” ಎಂದು ರಾಮನಗರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement