ವೀಡಿಯೊ…| ‘ತೃಣಮೂಲ ಕಾಂಗ್ರೆಸ್ಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ’ ಎಂದ ಕಾಂಗ್ರೆಸ್‌ ಹಿರಿಯ ನಾಯಕ…! ಟಿಎಂಸಿ ಕೆಂಡ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರು, ತೃಣಮೂಲ ಕಾಂಗ್ರೆಸ್‌ಗೆ ಮತ ಹಾಕುವುದಕ್ಕಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ ಎಂದು ಬುಧವಾರ ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬುಧವಾರ ಬಹರಂಪುರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಧೀರ್ ರಂಜನ್ ಚೌಧರಿ ಅವರು ಟಿಎಂಸಿಗಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ ಎಂದು ಚುನಾವಣಾ ರ್ಯಾಲಿಯಲ್ಲಿ ಹೇಳಿರುವ ವೀಡಿಯೊವನ್ನು ಹಂಚಿಕೊಂಡಿದೆ. ಹಾಗೂ ಅಧೀರ್‌ ಅವರು ಬಿಜೆಪಿಗೆ ಮತ ಹಾಕುವುದನ್ನು ಅನುಮೋದಿಸಿದ್ದಾರೆ ಎಂದು ಆರೋಪಿಸಿದೆ. .

ತೃಣಮೂಲದ ಅಧಿಕೃತ ಎಕ್ಸ್ ಹ್ಯಾಂಡಲ್ ಹಂಚಿಕೊಂಡಿರುವ ವೀಡಿಯೊದಲ್ಲಿ, ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಧೀರ್ ರಂಜನ್ ಚೌಧರಿ ಅವರು, “ಟಿಎಂಸಿಗೆ ಮತ ಹಾಕುವುದಕ್ಕಿಂತ ಬಿಜೆಪಿಗೆ ಮತ ಹಾಕುವುದು ಉತ್ತಮ” ಎಂದು ಬಂಗಾಳಿ ಭಾಷೆಯಲ್ಲಿ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷವು ಚೌಧರಿ ಅವರನ್ನು ಬಿಜೆಪಿಯ ಬಿ-ಟೀಮ್ ಸದಸ್ಯ ಎಂದು ಕರೆದಿದೆ ಮತ್ತು ಬಹರಂಪುರದ ಜನರು ಈ ದ್ರೋಹಕ್ಕೆ ತಕ್ಕ ಉತ್ತರವನ್ನು ನೀಡುತ್ತಾರೆ ಎಂದು ಹೇಳಿದೆ. ” ಈಗ ಬಂಗಾಳದಲ್ಲಿ ಅಧೀರ್‌ ಅವರು ಬಿಜೆಪಿಯ ಧ್ವನಿಯಾಗಿ ಬಡ್ತಿ ಪಡೆದಿದ್ದಾರೆ. ಬಹಿರಂಗವಾಗಿ ಬಿಜೆಪಿಗೆ ಮತ ನೀಡುವಂತೆ ಜನರಿಗೆ ಹೇಳುತ್ತಿದ್ದಾರೆ ಎಂಬುದನ್ನು ಕೇಳಿ. ನಮ್ಮ ಜನರ ಹಕ್ಕುಗಳನ್ನು ಕಸಿದುಕೊಂಡಿರುವ ಬಾಂಗ್ಲಾ-ವಿರೋಧಿ ಮಾತ್ರ ಬಿಜೆಪಿಯ ಪರವಾಗಿ ಪ್ರಚಾರ ಮಾಡಬಹುದು, ಮೇ 13 ರಂದು, ಬಹರಂಪುರದ ಜನರು ಈ ದ್ರೋಹಕ್ಕೆ ತಕ್ಕ ಉತ್ತರವನ್ನು ನೀಡುತ್ತಾರೆ ಎಂದು ಟಿಎಂಸಿ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದೆ.

ಪ್ರಮುಖ ಸುದ್ದಿ :-   ಕೇರಳಕ್ಕೆ ಮೇ 31ರಂದು ನೈಋತ್ಯ ಮಾನ್ಸೂನ್ ಪ್ರವೇಶ : ವಾಡಿಕೆಗಿಂತ ಹೆಚ್ಚು ಮಳೆ ಸಾಧ್ಯತೆ ; ಹವಾಮಾನ ಇಲಾಖೆ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಚೌಧರಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಕಾಂಗ್ರೆಸ್‌ ಪಕ್ಷಕ್ಕೆ ಇರುವ ಒಂದೇ ಒಂದು ಗುರಿ ಇದೆ ಎಂದು ಹೇಳಿದ್ದಾರೆ. ನಾನು ಇನ್ನೂ ವೀಡಿಯೊವನ್ನು ನೋಡಿಲ್ಲ ಎಂದು ಹೇಳಿದ್ದಾರೆ. ಅವರು ಯಾವ ಸಂದರ್ಭದಲ್ಲಿ ಈ ರೀತಿ ಹೇಳಿದ್ದಾರೆಂದು ನನಗೆ ತಿಳಿದಿಲ್ಲ ಆದರೆ ಕಾಂಗ್ರೆಸ್ ಪಕ್ಷವು ಬಿಜೆಪಿಯ ಸ್ಥಾನಗಳ ಸಂಖ್ಯೆಯನ್ನು ಹೆಚ್ಚು ಕಡಿಮೆ ಮಾಡುವ ಏಕೈಕ ಗುರಿಯನ್ನು ಹೊಂದಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡು ಅಧೀರ್ ರಂಜನ್ ಅವರ ವೀಡಿಯೊವನ್ನು ಬಿಜೆಪಿ ತ್ವರಿತವಾಗಿ ಹಂಚಿಕೊಳ್ಳಲು ಪ್ರಾರಂಭಿಸಿತು. ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಮಾತನಾಡಿ, ಟಿಎಂಸಿಗೆ ನೀಡುವ ಯಾವುದೇ ಮತವು ಪಶ್ಚಿಮ ಬಂಗಾಳಕ್ಕೆ ಹಾನಿ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕ ಅಧೀರ್‌ ರಂಜನ್‌ ಚೌಧರಿ ಅವರಿಗೆ ತಿಳಿದಿದೆ ಎಂದು ಹೇಳಿದ್ದಾರೆ.
ಭ್ರಷ್ಟ ಸಿಂಡಿಕೇಟ್, ಮಾಫಿಯಾಗಳು, ಸ್ಫೋಟದ ಆರೋಪಿಗಳು, ಭಯೋತ್ಪಾದಕರು ಮತ್ತು ಸಂದೇಶಖಾಲಿಯಲ್ಲಿ ಷಹಜಹಾನ್ ಶೇಖ್‌ನಂತಹ ಅತ್ಯಾಚಾರಿಗಳನ್ನು ರಕ್ಷಿಸಲು ಟಿಎಂಸಿ ನೀತಿಗಳಿಂದಾಗಿ ಅಧೀರ್ ಅವರು ಹೀಗೆ ಹೇಳಿದ್ದಾರೆ ಎಂದು ಬಿಜೆಪಿ ನಾಯಕ ಹೇಳಿದರು.
ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಚೌಧರಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಹಲವು ಬಾರಿ ಗೇಲಿ ಮಾಡಿದ್ದರು.

ಪ್ರಮುಖ ಸುದ್ದಿ :-   ಅಕ್ರಮ ಹಣ ವರ್ಗಾವಣೆ ಪ್ರಕರಣ : ಜಾರ್ಖಂಡ ಸಚಿವನನ್ನು ಬಂಧಿಸಿದ ಇ.ಡಿ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement