ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್‌ನ (Karnataka Legislative Council Elections 2024) ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಆಗಿದ್ದು, ಜೂನ್ 3 ರಂದು ಮತದಾನ ನಡೆಯಲಿದೆ ಹಾಗೂ ಜೂನ್ 6 ರಂದು ಮತ ಎಣಿಕೆ ನಡೆಯಲಿದೆ.
ಬೆಂಗಳೂರು ಪದವೀಧರ ಕ್ಷೇತ್ರ , ಕರ್ನಾಟಕ ಈಶಾನ್ಯ ಪದವೀಧರ , ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ, ಕರ್ನಾಟಕ ನೈರುತ್ಯ ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಪದವೀಧರ ಕ್ಷೇತ್ರದಿಂದ ಡಾ. ಚಂದ್ರಶೇಖರ ಪಾಟೀಲ್, ಅಯನೂರು ಮಂಜುನಾಥ, ಎ ದೇವೇಗೌಡ ಹಾಗೂ ಶಿಕ್ಷಕರ ಕ್ಷೇತ್ರದಿಂದ ವೈ ಎ ನಾರಾಯಣ ಸ್ವಾಮಿ, ಎಸ್‌ ಎಲ್ ಬೋಜೇಗೌಡ ಹಾಗೂ ಮರಿತಿಬ್ಬೇಗೌಡ ಅವರ ಅವಧಿ ಜೂನ್ 21 ಕ್ಕೆ ಮುಕ್ತಾಯಗೊಳ್ಳಲಿದೆ.
ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದೆ. ಮೇ 17 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಮೇ 20 ಆಗಿದೆ. ಮತದಾನ ದಿನಾಂಕ – ಜೂನ್ 3ರಂದು ಮತದಾನ ನಡೆಯಲಿದ್ದು, ಮತದಾನ ಬೆಳಗ್ಗೆ 8 ರಿಂದ ಸಂಜೆ 4ರ ವರೆಗೆ ನಡೆಯಲಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ.

ಪ್ರಮುಖ ಸುದ್ದಿ :-   ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement