ಶಿರಸಿ: ಕೆಪಿಸಿಸಿ ಸದಸ್ಯ ದೀಪಕ ದೊಡ್ಡೂರು, ಇತರರ ನಿವಾಸದ ಮೇಲೆ ಐಟಿ ದಾಳಿ

ಶಿರಸಿ: ಉದ್ಯಮಿ ಹಾಗೂ ಕೆಪಿಸಿಸಿ ಸದಸ್ಯ ಶಿರಸಿಯ ದೀಪಕ ದೊಡ್ಡೂರು ಹಾಗೂ ಇವರ ಪಾಲುದಾರರ ನಿವಾಸದ ಮೇಲೆ ಶುಕ್ರವಾರ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಮೂರು ಕಾರುಗಳಲ್ಲಿ ಬಂದ ಆದಾಯ ತೆರಿಗೆ ಅಧಿಕಾರಿಗಳ ತಂಡ ದೀಪಕ ಅವರ ನಗರದ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 10 ಜನ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಇವರಲ್ಲದೆ ಅಡಕೆ ವ್ಯಾಪಾರಿ ಶಿವರಾಮ ಹೆಗಡೆ,   ಟಿಎಸ್‌ಎಸ್‌ ಮಾಜಿ ಪ್ರಧಾನ ವ್ಯವಸ್ಥಾಪಕ ರವೀಶ ಹೆಗಡೆ, ಪ್ರವೀಣ ಹೆಗಡೆ ಇತರರ ಮನೆ ಮೇಲೆಯೂ ದಾಳಿ ನಡೆದಿದೆ ಎಂಬ ಮಾಹಿತಿಯಿದೆ. ಐಟಿ ಅಧಿಕಾರಿಗಳ ತಂಡ ವ್ಯವಹಾರ ಪರಿಶೀಲಿಸುತ್ತಿದೆ. ಯಾವ ಕಾರಣಕ್ಕಾಗಿ ದಾಳಿ ನಡೆದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಕಾರವಾರ, ಮಂಗಳೂರು ಹಾಗೂ ಇತರೆಡೆಯಿಂದ ಕಾರಿನಲ್ಲಿ ಬಂದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ನಿವಾಸದ ಬಳಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement