ಪ್ರಜ್ವಲ್ ರೇವಣ್ಣ ವಿರುದ್ಧ 2ನೇ ಎಫ್ ಐ ಆರ್ ದಾಖಲು

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮಾಜಿ ಜಿಪಂ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್ ರೇವಣ್ಣ ನಿರಂತರವಾಗಿ ಅತ್ಯಾಚಾರ ವೆಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಲೈಂಗಿಕ ದೌರ್ಜನ್ಯದ ವೀಡಿಯೊ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿರುದ್ಧ ಶುಕ್ರವಾರ ಮತ್ತೊಂದು ಎಫ್ ಐಆರ್ ದಾಖಲಾಗಿದ್ದು, ಪ್ರಜ್ವಲ್ ರೇವಣ್ಣ ತನ್ನ ಮೇಲೆ ವರ್ಷಗಳ ಕಾಲ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಸಿಐಡಿ (Criminal Investigation Department-CID)ಗೆ ದೂರು ನೀಡಿದ್ದಾರೆ.
ನಿರಂತರವಾಗಿ ಅತ್ಯಾಚಾರ ಮಾಡಿ ದೈಹಿಕ ಸಂಪರ್ಕದ ಸನ್ನಿವೇಶಗಳನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಅವುಗಳನ್ನು ಸಾಮಾಜಿ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಹೇಳಿ ಬೆದರಿಸಿ ಪದೇ ಪದೇ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸಿಐಡಿ ಬಳಿ ಮೇ 1 ರಂದು ಪ್ರಕರಣ ದಾಖಲಿಸಿದ್ದು, ಈ ಮೂಲಕ ಪ್ರಜ್ವಲ್ ರೇವಣ್ಣ ವಿರುದ್ಧ 2ನೇ ಎಫ್ ಐಆರ್ ದಾಖಲಾದಂತಾಗಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement