ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

ಮೈಸೂರು: ಮೈಸೂರು: ಪ್ರಜ್ವಲ್ ರೇವಣ್ಣ ಅವರ ಆರೋಪಿತ ಲೈಂಗಿಕ ದೌರ್ಜ್ಯನದ ಪ್ರಕರಣಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (H.D Revanna) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ತನ್ನ ತಾಯಿ ನಾಪತ್ತೆಯಾಗಿದ್ದಾರೆ, ಹಾಗೂ ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ದ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಪೆನ್‍ಡ್ರೈವ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗ ದೂರು ದಾಖಲಿಸಿದ್ದು, ಎಫ್‍ಐಆರ್ ದಾಖಲಾಗಿದೆ. ತನ್ನ ತಾಯಿ ನಾಪತ್ತೆಯಾಗಿದ್ದಾರೆ. ಬಿಡುಗಡೆಯಾದ ಅಶ್ಲೀಲ ವಿಡಿಯೊದಲ್ಲಿ ಅವರ ಚಿತ್ರವೂ ಇತ್ತು, ಬಳಿಕ ಅವರು ನಾಪತ್ತೆಯಾಗಿದ್ದಾರೆ. ದೂರಿನಲ್ಲಿ ಭವಾನಿ ಅಕ್ಕ ಕರೆಯುತ್ತಿದ್ದಾರೆ ಎಂದು ಸತೀಶ ಬಾಬು ಎಂಬಾತ ಮನೆಗೆ ಬಂದು ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ನನ್ನ ತಾಯಿ ನಾಪತ್ತೆಯಾಗಿದ್ದಾರೆ ಎಂದು ಸಂತ್ರಸ್ತೆ ಪುತ್ರ ದೂರು ದಾಖಲಿಸಿದ್ದು, ರೇವಣ್ಣ ಹಾಗೂ ಸತೀಶ ಬಾಬು ಎಂಬವರು ವಿರುದ್ಧ ದೂರು ನೀಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ಮಹಿಳೆಯು ಹೊಳೆನರಸೀಪುರದ ಚೆನ್ನಾಂಬಿಕಾ ಥಿಯೇಟರ್ ಪಕ್ಕದಲ್ಲಿರುವ ರೇವಣ್ಣ ಮನೆಯಲ್ಲಿ ಸುಮಾರು 6 ವರ್ಷಗಳ ಕಾಲ ಕೆಲಸ ಮಾಡಿದ್ದರು. ಮೂರು ವರ್ಷಗಳ ಹಿಂದೆ ರೇವಣ್ಣ ಅವರ ಮನೆಯ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ರೇವಣ್ಣ ಅವರು ಬರಲು ಹೇಳಿದ್ದಾರೆ ಎಂದು ಸತೀಶ ಬಾಬು ಕರೆದುಕೊಂಡು‌ ಹೋಗಿದ್ದಾರೆ. ಈಗ ಅವರು ಎಲ್ಲಿದ್ದಾರೆಂದು ಗೊತ್ತಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರಿನ ಅನ್ವಯ ಹೆಚ್​ಡಿ ರೇವಣ್ಣ ವಿರುದ್ಧ ಸೆಕ್ಷನ್ 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ರೇವಣ್ಣರನ್ನು ಆರೋಪಿ ಸಂಖ್ಯೆ 1 ಎಂದೂ ಸತೀಶ ಬಾಬಣ್ಣ ಎಂಬವರನ್ನು ಆರೋಪಿ ಸಂಖ್ಯೆ 2 ಎಂದೂ ನಮೂದಿಸಲಾಗಿದೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸರು ಸತೀಶ ಬಾಬುವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement