ಬಿಜೆಪಿ ಸೇರಿದ ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ

ನವದೆಹಲಿ: ಲೋಕಸಭೆ ಚುನಾವಣೆಗೆ ಎಎಪಿ ಜೊತೆಗಿನ ಕಾಂಗ್ರೆಸ್‌ ಪಕ್ಷದ ಮೈತ್ರಿ ಮಾಡಿಕೊಂಡಿದ್ದನ್ನು ವಿರೋಧಿಸಿ ಕೆಲದಿನಗಳ ಹಿಂದೆ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಔಪಚಾರಿಕವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚದೇವ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ … Continued

ಉಗ್ರರ ದಾಳಿಯಲ್ಲಿ ಓರ್ವ ವಾಯುಪಡೆ ಸಿಬ್ಬಂದಿ ಹುತಾತ್ಮ, 5 ಮಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಸುರನ್‌ಕೋಟೆ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ಒಂದು ವಾಹನ ಸೇರಿದಂತೆ ಎರಡು ವಾಹನಗಳ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಭಾರತೀಯ ವಾಯುಪಡೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆ ಹಾಗೂ ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡಿರುವ ಐವರಲ್ಲಿ ಒಬ್ಬ ಏರ್ ಮನ್ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರೆಲ್ಲರನ್ನೂ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

ಬೆಂಗಳೂರು : ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್‌ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ‌ ಎಚ್.ಡಿ. ರೇವಣ್ಣ ಅವರಿಗೆ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಶನಿವಾರ ಸಂಜೆ ಅವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ … Continued

ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ಬೆಂಗಳೂರು : ಲೈಂಗಿಕ ಹಗರಣಕ್ಕೆ ಪೂರಕವಾಗಿ ವರದಿಯಾಗಿರುವ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್‌ ಮುಖಂಡ ಹಾಗೂ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ನಿರಾಕರಿಸಿದೆ. ಎಚ್‌.ಡಿ. ರೇವಣ್ಣ ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ … Continued

‘ಪ್ರಿಯಾಂಕಾ ಗಾಂಧಿ ವಿರುದ್ಧ ಪಕ್ಷದಲ್ಲೇ ದೊಡ್ಡ ಪಿತೂರಿ…ಜೂನ್ 4ರ ನಂತರ ಕಾಂಗ್ರೆಸ್ ಅಣ್ಣ-ತಂಗಿ ಬಣಗಳಾಗಿ ವಿಭಜನೆ’ : ಕಾಂಗ್ರೆಸ್‌ ಮಾಜಿ ನಾಯಕನ ಸ್ಫೋಟಕ ಹೇಳಿಕೆ

ನವದೆಹಲಿ: ಮಾರ್ಚ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿತರಾದ ಆಚಾರ್ಯ ಪ್ರಮೋದ ಕೃಷ್ಣಂ ಅವರು ಲೋಕಸಭೆ ಚುನಾವಣೆಗೆ ರಾಯ್ಬರೇಲಿ ಕ್ಷೇತ್ರದಿಂದ ಕಣಕ್ಕಿಳಿದಿರುವ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕೆ ಪ್ರವೇಶಿಸುವ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದ ಒಂದು ದಿನದ ನಂತರ, ಕಾಂಗ್ರೆಸ್‌  ಪಕ್ಷದಲ್ಲಿ ನಡೆಯುತ್ತಿರುವ ಷಡ್ಯಂತ್ರಕ್ಕೆ ಪ್ರಿಯಾಂಕಾ ಗಾಂಧಿ ಬಲಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. … Continued

ಹರ್ದೀಪ್ ನಿಜ್ಜರ್ ಹತ್ಯೆ ಪ್ರಕರಣ : ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ ಪೊಲೀಸರು

ಕಳೆದ ವರ್ಷ ಬ್ರಿಟಿಷ್ ಕೊಲಂಬಿಯಾದಲ್ಲಿ ಕೊಲೆಯಾದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್‌ಗೆ ಸಂಬಂಧಿಸಿದಂತೆ ಹಿಟ್ ಸ್ಕ್ವಾಡ್‌ನ ಮೂವರು ಭಾರತೀಯ ಸದಸ್ಯರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಕೆನಡಾದ ಪೊಲೀಸರು ತಿಳಿಸಿದ್ದಾರೆ. ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಮೂವರು ಬಂಧಿತರನ್ನು ಕರಣ್‌ಪ್ರೀತ್ ಸಿಂಗ್ (28), ಕಮಲಪ್ರೀತ್ ಸಿಂಗ್ (22) ಮತ್ತು ಕರಣ್ ಬ್ರಾರ್ (22) ಎಂದು ಹೆಸರಿಸಿದ್ದಾರೆ. … Continued

ವೀಡಿಯೊ…| ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಶಿಕ್ಷಕಿ

ಲಕ್ನೋ: ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಫೇಶಿಯಲ್ ಮಾಡಿಸಿಕೊಂಡ ಶಿಕ್ಷಕಿಯೊಬ್ಬರಿಗೆ ಮುಖ್ಯಾಧ್ಯಾಪಕಿಯೊಬ್ಬರು ಕಚ್ಚಿದ ಘಟನೆಯ ಹಸಿಯಾಗಿರುವಾಗಲೇ ಶಾಲೆಗೆ ತಡವಾಗಿ ಬಂದ ಆರೋಪದ ಮೇಲೆ ಪ್ರಾಂಶುಪಾಲರೊಬ್ಬರು ಶಿಕ್ಷಕಿಯೊಬ್ಬರಿಗೆ ಥಳಿಸಿರುವ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಗ್ರಾದ ಸೀಗಾನಾ ಗ್ರಾಮದ ಪೂರ್ವ-ಪ್ರೌಢಶಾಲೆಯ ಪ್ರಾಂಶುಪಾಲೆಯು ಶಿಕ್ಷಕಿ ಮೇಲೆ ಹಲ್ಲೆ ನದಿರುವುದು ವೀಡಿಯೊದಲ್ಲಿ ಸೆರೆಯಾಗಿದೆ. ಹೊಡೆದಾಟದ ಸಮಯದಲ್ಲಿ ತನ್ನ ಬಟ್ಟೆಗಳನ್ನು … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್​​​ಗೆ ಮತ್ತೊಂದು ಶಾಕ್ ; ಸ್ಪರ್ಧಿಸಲು ನಿರಾಕರಿಸಿ ಟಿಕೆಟ್‌ ವಾಪಸ್‌ ಮಾಡಿದ ಕಾಂಗ್ರೆಸ್​​ ಅಭ್ಯರ್ಥಿ…!

ಪುರಿ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ್ತೊಂದು ಹಿನ್ನಡೆಯಲ್ಲಿ, ಒಡಿಶಾದ ಕಾಂಗ್ರೆಸ್‌ ಅಭ್ಯರ್ಥಿಯೊಬ್ಬರು ಪ್ರಚಾರಕ್ಕೆ ಪಕ್ಷ ಹಣ ನೀಡದ ಕಾರಣ ಹಣಕಾಸಿನ ಕೊರತೆಯಿಂದ ಪುರಿ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದಾರೆ…! ಕಾಂಗ್ರೆಸ್‌ ಅಭ್ಯರ್ಥಿ ತನಗೆ ಪಕ್ಷದಿಂದ ಹಣಕಾಸಿನ ಯಾವುದೇ ನೆರವು ಸಿಗುತ್ತಿಲ್ಲ ಎಂದು ಹೇಳಿದ್ದಾರೆ. ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸುಚರಿತಾ ಮೊಹಂತಿ … Continued

ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ವ್ಯಕ್ತಿ ; ಪತ್ನಿಗೆ ಥಳಿಸಿ ಪರಾರಿ…!

ಆಘಾತಕಾರಿ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ಚಲಿಸುವ ರೈಲಿನಲ್ಲಿಯೇ ತನ್ನ ಹೆಂಡತಿಗೆ ತ್ರಿವಳಿ ತಲಾಖ್ ನೀಡಿ ನಂತರ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 29 ರಂದು ಮೊಹಮ್ಮದ್ ಅರ್ಷದ್ (28) ಎಂಬಾತ ತನ್ನ ಪತ್ನಿ ಅಫ್ಸಾನಾ (26) ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ಝಾನ್ಸಿ ಜಂಕ್ಷನ್‌ಗೆ ಸ್ವಲ್ಪ ಮೊದಲು ಈ ಘಟನೆ ಸಂಭವಿಸಿದೆ. ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ಅರ್ಷದ್ … Continued

ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ಹುಬ್ಬಳ್ಳಿ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ಪೊಲೀಸ್ ವಶದಲ್ಲಿದ್ದ ಆರೋಪಿಯೊಬ್ಬ ಶುಕ್ರವಾರ ತಡರಾತ್ರಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿ ಪರಾರಿಯಾಗಿದ್ದ ಆರೋಪಿ ಸದ್ದಾಂ ಹುಸೇನ್ ಎಂಬಾತನ ಕಾಲಿಗೆ … Continued