ಬಿಜೆಪಿ ಸೇರಿದ ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ

ನವದೆಹಲಿ: ಲೋಕಸಭೆ ಚುನಾವಣೆಗೆ ಎಎಪಿ ಜೊತೆಗಿನ ಕಾಂಗ್ರೆಸ್‌ ಪಕ್ಷದ ಮೈತ್ರಿ ಮಾಡಿಕೊಂಡಿದ್ದನ್ನು ವಿರೋಧಿಸಿ ಕೆಲದಿನಗಳ ಹಿಂದೆ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ ಅವರು ಶನಿವಾರ ಔಪಚಾರಿಕವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚದೇವ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ ತಾವ್ಡೆ ಅವರ ಸಮ್ಮುಖದಲ್ಲಿ ಅರವಿಂದರ್ ಸಿಂಗ್ ಲವ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಲವ್ಲಿ ಜೊತೆಗೆ, ಕಾಂಗ್ರೆಸ್ ಮಾಜಿ ಶಾಸಕರಾದ ರಾಜಕುಮಾರ ಚೌಹಾಣ, ನಸೀಬ್ ಸಿಂಗ್, ನೀರಜ್ ಬಸೋಯಾ ಮತ್ತು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಮಿತ ಮಲಿಕ್ ಕೂಡ ದೆಹಲಿಯಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಇದಕ್ಕೂ ಮೊದಲು, ಲವ್ಲಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ 2017 ರಲ್ಲಿ ಬಿಜೆಪಿಗೆ ಸೇರಿದ್ದರು. ಆದಾಗ್ಯೂ ಅವರು 2018 ರಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮರಳಿದ್ದರು.
ಬಿಜೆಪಿಗೆ ಸೇರ್ಪಡೆಯಾದ ನಂತರ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ದೆಹಲಿಯ ಎಲ್ಲಾ ಏಳು ಲೋಕಸಭಾ ಸ್ಥಾನಗಳನ್ನೂ ಬಿಜೆಪಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement