ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

ಬೆಂಗಳೂರು : ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್‌ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ‌ ಎಚ್.ಡಿ. ರೇವಣ್ಣ ಅವರಿಗೆ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಶನಿವಾರ ಸಂಜೆ ಅವರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರವರ ನಿವಾಸದಲ್ಲಿ ರೇವಣ್ಣ ಇರುವ ಬಗ್ಗೆ ಮಾಹಿತಿ ಆಧರಿಸಿ ಎಸ್‌ಐಟಿ ಅಧಿಕಾರಿಗಳು ತೆರಳಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಎಸ್‌ಐಟಿ ಅಧಿಕಾರಿಗಳು 20 ನಿಮಿಷಗಳ ಕಾಲ ದೇವೇಗೌಡರ ನಿವಾಸದ ಮುಂದೆ ಕಾಯ್ದುಕೊಂಡು ನಿಂತಿದ್ದರು. ಬಳಿಕ ಬಾಗಿಲು ತೆಗೆದು ರೇವಣ್ಣ ಹೊರಬಂದರು.

ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿ, 24 ಗಂಟೆಗಳಲ್ಲಿ ವಿಚಾರಣೆಗೆ ಹಾಜರಾಗಲು ಗಡುವು ನೀಡಿತ್ತು. ವಿಚಾರಣೆಗೆ ಬಂದಿರಲಿಲ್ಲ. ನಂತರ ಎಸ್‌ಐಟಿ ಲುಕ್‌ ಔಟ್‌ ನೋಟಿಸ್‌ ಜಾರಿ ಮಾಡಿತ್ತು. ಈಗ ಕಾನೂನು ನಿಯಮ ಪ್ರಕಾರ ಎಸ್‌ಐಟಿ ರೇವಣ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದೆ.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

ಶನಿವಾರ ಬೆಳಗ್ಗೆ ಹೊಳೆನರಸೀಪುರದ ತಮ್ಮ ಮನೆಯಲ್ಲಿದ್ದ ರೇವಣ್ಣ ಸಾಯಂಕಾಲದ ಹೊತ್ತಿದೆ ನಗರದ ಪದ್ಮನಾಭನಗರದಲ್ಲಿರುವ ತಂದೆ ದೇವೇಗೌಡರ ಮನೆಗೆ ಬಂದಿದ್ದರು. ಮಹಿಳೆ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು, ದೇವೇ ಗೌಡ ಅವರ ಮನೆಗೆ ಆಗಮಿಸಿದ ರೇವಣ್ಣ ಅವರನ್ನು ತಮ್ಮ ವಶಕ್ಕೆ ಪಡೆದರು. ಅಧಿಕಾರಿಗಳು ರೇವಣ್ಣರನ್ನು ಬೆಂಗಳೂರು ಅರಮನೆ ರಸ್ತೆಯಲ್ಲಿರುವ ಸಿಐಡಿ ಕಚೇರಿ ಕಾರ್ಲಟನ್‌ ಭವನಕ್ಕೆ ಕರೆದೊಯ್ದರು.

ಎಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಜೆಡಿಎಸ್ ಸಂಸದ ಪ್ರಜ್ವಲ್ ಅವರ ಲೈಂಗಿಕ ದೌರ್ಜನ್ಯದ ಆರೋಪಿತ ವಿಡಿಯೊಗಳಲ್ಲಿ ಕಂಡುಬಂದಿದ್ದ ತನ್ನ ತಾಯಿಯನ್ನು ರೇವಣ್ಣ ಅವರ ಸಹಚರ ಸತೀಶ್ ಬಾಬಣ್ಣ ಅಪಹರಣ ಮಾಡಿದ್ದಾರೆ ಎಂದು 20 ವರ್ಷದ ಯುವಕ ಆರೋಪಿಸಿ ಹೆಚ್ ಡಿ ರೇವಣ್ಣ ಹಾಗೂ ಸತೀಶ ಬಾಬು ವಿರುದ್ಧ ಅಪಹರಣ ಪ್ರಕರಣವನ್ನು ದಾಖಲಿಸಿದ್ದರು. ರೇವಣ್ಣ ಮತ್ತು ಬಾಬಣ್ಣ ವಿರುದ್ಧ ಪೊಲೀಸರು ಅಪಹರಣ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಮತ್ತೊಬ್ಬ ಆರೋಪಿ ಸತೀಶ ಬಾಬು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

ಏತನ್ಮಧ್ಯೆ, ಮಹಿಳೆಯನ್ನು ಹುಣಸೂರಿನಲ್ಲಿ ಪತ್ತೆ ಮಾಡಲಾಗಿದ್ದು, ವಿಶೇಷ ತನಿಖಾ ತಂಡವು ವಿಚಾರಣೆ ನಡೆಸುತ್ತಿದೆ. ಎಫ್‌ಐಆರ್ ಪ್ರಕಾರ, ಮಹಿಳೆ ರೇವಣ್ಣ ಅವರ ನಿವಾಸ ಮತ್ತು ಫಾರ್ಮ್‌ಹೌಸ್‌ನಲ್ಲಿ ಆರು ವರ್ಷಗಳ ಕಾಲ ಕೆಲಸ ಮಾಡುತ್ತಿದ್ದು, ನಂತರ ಕೆಲಸ ತೊರೆದು ಮನೆಗೆ ಬಂದು ದಿನಗೂಲಿ ಕೆಲಸ ಮಾಡುತ್ತಿದ್ದರು. ಎಫ್‌ಐಆರ್‌ನ ಪ್ರಕಾರ, ಏಪ್ರಿಲ್ 29 ರಂದು ಸತೀಶ ಬಾಬು ರೇವಣ್ಣ ಬರಲು ಹೇಳಿದ್ದಾರೆಂದು ಮಹಿಳೆಗೆ ಹೇಳಿ ತನ್ನೊಂದಿಗೆ ಬರುವಂತೆ ಒತ್ತಾಯಿಸಿದ್ದಾನೆ, ಪೊಲೀಸರಿಗೆ ತಿಳಿಸಿದಂತೆ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾನೆ. ಮಹಿಳೆಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾನೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement