ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ಹುಬ್ಬಳ್ಳಿ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ಪೊಲೀಸ್ ವಶದಲ್ಲಿದ್ದ ಆರೋಪಿಯೊಬ್ಬ ಶುಕ್ರವಾರ ತಡರಾತ್ರಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದಿದ್ದಾರೆ.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿ ಪರಾರಿಯಾಗಿದ್ದ ಆರೋಪಿ ಸದ್ದಾಂ ಹುಸೇನ್ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿದ್ದಾರೆ.

ಅತ್ಯಾಚಾರ ಆರೋಪಿ ಸದ್ದಾಂ ಹುಸೇನ್‌ ಎಂಬಾತನನ್ನು ಬಂಧಿಸಿ ಸ್ಥಳ ಮಹಜರು ಮಾಡಲು ಕರೆದೊಯ್ಯುತ್ತಿದ್ದಾಗ ಆತ ಚಾಕುವಿನಿಂದ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆಗ ಧಾರವಾಡ ವಿದ್ಯಾಗಿರಿ ಠಾಣೆಯ ಸಿಪಿಐ ಸಂಗಮೇಶ ದಿಡಿಗನಾಳ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಾಗುತ್ತಿದೆ.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಆಕೆ ಗರ್ಭಿಣಿಯಾದ ವಿಷಯ ತಿಳಿಸಿದ್ದರು. ಪೋಷಕರು ಕಂಗಾಲಾಗಿದ್ದರು. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಅಪ್ರಾಪ್ತೆಗೆ ಆರೋಪಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement