ವೀಡಿಯೊ | ಜನವರಿಯಲ್ಲಿ ಉದ್ಘಾಟನೆಯಾದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ಇದೇ ಮೊದಲ ಬಾರಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ಅಯೋಧ್ಯಾ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಜನವರಿಯಲ್ಲಿ ಮಂದಿರ ಉದ್ಘಾಟನೆಯ ನಂತರ ಇದು ಅವರ ಮೊದಲ ಭೇಟಿಯಾಗಿದೆ. ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನದ ಎರಡು ದಿನಗಳ ಮೊದಲು ದೂರದರ್ಶನದಲ್ಲಿ ಪ್ರಸಾರವಾದ ಸಮಾರಂಭದಲ್ಲಿ, ಪ್ರಧಾನಿ ಮೋದಿ ಅವರು ರಾಮಲಲ್ಲಾ ವಿಗ್ರಹಕ್ಕೆ ಸಾಷ್ಟಾಂಗ ನಮಸ್ಕಾರ ಮಾಡುತ್ತಿರುವುದು ಕಂಡುಬಂದಿದೆ. … Continued

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

ಮಂಗಳೂರು : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಂ ನಾಶಿಯಾ(14 )ಮೃತ ಬಾಲಕಿಯರು ಎಂದು ಗುರುತಿಸಲಾಗಿದೆ. ಮೂಲತಃ ನಾವೂರ … Continued

ಮಹಿಳೆ ಅಪಹರಣ ಪ್ರಕರಣ: ಶಾಸಕ ಎಚ್. ಡಿ. ರೇವಣ್ಣ ಮೇ 8ರ ವರೆಗೆ ಎಸ್ ಐಟಿ ವಶಕ್ಕೆ

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ನ್ಯಾಯಾಲಯ ಮೇ ೮ರ ವರೆಗೆ ಸಿಐಡಿ ಎಸ್‌ಐಟಿ (ವಿಶೇಷ ತನಿಖಾ ತಂಡದ) ವಶಕ್ಕೆ ನೀಡಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಪುತ್ರ ಹಾಗೂ ಶಾಸಕ ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ ಹದಿನೇಳನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರ ಕುಮಾರ ಎಂ … Continued

ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ : ಗೃಹ ಸಚಿವ ಡಾ..ಪರಮೇಶ್ವರ

ಬೆಂಗಳೂರು : ಲೈಂಗಿಕ ಕಿರುಕುಳ ಪ್ರಕರಣ ಎದುರಿಸುತ್ತಿರುವ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರಲು ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ಇಂಟರ್‌ಪೋಲ್‌ ಸಹಾಯ ಪಡೆಯಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಭಾನುವಾರ ಹೇಳಿದ್ದಾರೆ. ಅಪರಾಧಕ್ಕೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಅದರ ಸದಸ್ಯ ರಾಷ್ಟ್ರಗಳಿಂದ … Continued

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಇವೆಲ್ಲ ರಾಜಕೀಯ ಪಿತೂರಿಯಿಂದ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revannna) ಆರೋಪಿಸಿದ್ದಾರೆ. ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಎಸ್‌ಐಟಿ (SIT) ಅಧಿಕಾರಿಗಳು ಹಾಜರುಪಡಿಸಲು ಕರೆದೊಯ್ಯುವ ಮುನ್ನ ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಗಾಗುವ ವೇಳೆ ಮಾಧ್ಯಮಗಳಿಗೆ … Continued

ಮೊಬೈಲ್ ನಲ್ಲಿ ಹುಡುಗರ ಜೊತೆ ಹರಟೆ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಕೊಡಲಿಯಿಂದ ಹೊಡೆದು ಕೊಂದ 14 ವರ್ಷದ ಬಾಲಕಿ…!

ರಾಜನಂದಗಾಂವ್ : ಬುದ್ದಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕಿಯೊಬ್ಬಳು ಅಣ್ಣನನ್ನೇ ಕೊಲೆ ಮಾಡಿದ ಭಯಾನಕ ಘಟನೆ ಛತ್ತೀಸ್ ಗಡದ ಖೈರಗಢ-ಚುಯಿಖಾದನ್-ಗಂಡೈ (ಕೆಸಿಜಿ) ಜಿಲ್ಲೆಯಲ್ಲಿ ನಡೆದಿದೆ. ಮೊಬೈಲ್ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಬುದ್ಧಿವಾದ ಹೇಳಿದ ನಂತರ ತನ್ನ ಅಣ್ಣನನ್ನು ಕೊಡಲಿಯಿಂದ ಹೊಡೆದು ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುಯಿಖಾಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಲಿದಿಹ್ಕಲಾ ಗ್ರಾಮದಲ್ಲಿ ನಡೆದ … Continued

ವೀಡಿಯೊ…| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

ಹಾವೇರಿ: ಚುನಾವಣಾ ಪ್ರಚಾರಕ್ಕೆಂದು ಹಾವೇರಿ ಜಿಲ್ಲೆಯ ಸವಣೂರಿಗೆ ಆಗಮಿಸಿದ ವೇಳೆ ತಮ್ಮ ಹೆಗಲ ಮೇಲೆ ಕೈಹಾಕಿದ ಸ್ಥಳೀಯ ಕಾಂಗ್ರೆಸ್​ ಮುಖಂಡನಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ (DK Shivakumar) ಕಪಾಳಮೋಕ್ಷ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕಾಂಗ್ರೆಸ್​ ಅಭ್ಯರ್ಥಿ ‌ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ಡಿ.ಕೆ.ಶಿವಕುಮಾರ ತಮ್ಮ ಕಾರಿನಿಂದ ಇಳಿದು ಹೊರಬಂದಾಗ … Continued

26/11ರ ಮುಂಬೈ ಭಯೋತ್ಪಾಕ ದಾಳಿ: ಹೇಮಂತ್ ಕರ್ಕರೆ ಕೊಂದಿದ್ದು ಉಗ್ರ ಕಸಬ್‌ ಅಲ್ಲ, ಕೊಂದಿದ್ದು ಆರ್‌ ಎಸ್‌ ಎಸ್ ನಂಟಿನ ಪೊಲೀಸ್‌ ಅಧಿಕಾರಿ ; ಕಾಂಗ್ರೆಸ್​ ನಾಯಕನ ವಿವಾದಿತ ಹೇಳಿಕೆ

ಮುಂಬೈ : 26/11ರ ಮುಂಬೈ ದಾಳಿ ವೇಳೆ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆ ಅವರನ್ನು ಭಯೋತ್ಪಾದಕ ಅಜ್ಮಲ್ ಕಸಬ್ ಕೊಂದಿಲ್ಲ, ಆದರೆ ಆರ್‌ಎಸ್‌ಎಸ್-ಸಂಯೋಜಿತ ಪೋಲೀಸ್ ಅಧಿಕಾರಿಯೊಬ್ಬರು ಅವರನ್ನು ಹತ್ಯೆ ಮಾಡಿದ್ದಾರೆ ಮತ್ತು ವಕೀಲ ಉಜ್ವಲ್ ನಿಕಮ್ ಒಬ್ಬ ದೇಶದ್ರೋಹಿ, ಅವರು ಸತ್ಯವನ್ನು ಹತ್ತಿಕ್ಕಿದ್ದಾರೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ವಿಜಯ್ ವಾಡೆಟ್ಟಿವಾರ್ ಅವರು ಹೇಳಿಕೆ ನೀಡಿರುವುದು … Continued

ಸಿಖ್‌ ಪವಿತ್ರ ಗ್ರಂಥದ ಕೆಲ ಪುಟ ಹರಿದು ಹಾಕಿದ ಆರೋಪ : ಯುವಕನನ್ನು ಬಡಿದುಕೊಂದ ಭಕ್ತರು

ಚಂಡೀಗಢ: ಪಂಜಾಬ್‌ನ ಫಿರೋಜಪುರದ ಗುರುದ್ವಾರವೊಂದರಲ್ಲಿ ಶನಿವಾರ ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್‌ನ ಕೆಲವು ಪುಟಗಳನ್ನು ಹರಿದು ಹಾಕಿದ್ದಾನೆಂದು ಆರೋಪಿಸಿ 19 ವರ್ಷದ ಯುವಕನನ್ನು ಹೊಡೆದು ಕೊಲ್ಲಲಾಗಿದೆ. ಬಂಡಲಾ ಗ್ರಾಮದ ಗುರುದ್ವಾರ ಬಾಬಾ ಬೀರ್ ಸಿಂಗ್‌ನಲ್ಲಿ ಬಕ್ಷೀಶ್ ಸಿಂಗ್ ಎಂಬಾತ ಈ ಕೃತ್ಯ ಎಸಗಿದ್ದು, ನಂತರ ಕೋಪಗೊಂಡ ಗುಂಪು ಆತನನ್ನು ಹಿಡಿದು ಥಳಿಸಿದೆ ಎಂದು … Continued

ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

ದಾಂಡೇಲಿ : ಗಂಡ ಹೆಂಡತಿಯ ಜಗಳದ ಆರು ವರ್ಷದ ಗಂಡು ಮಗುವೊಂದನ್ನು ನಾಲಾಕ್ಕೆ ಬಿಸಾಕಿದ ನಂತರ ಮಗು ಸಾವಿಗೀಡಾದ ಅಮಾನವೀಯ ಘಟನೆ ಶನಿವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ದಂಪತಿ ಶನಿವಾರ ರಾತ್ರಿ ಜಗಳ‌ ಮಾಡಿಕೊಂಡಿದ್ದಾರೆ. ಜಗಳದಿಂದ ಮಾನಸಿಕವಾಗಿ‌ ನೊಂದ ಮಹಿಳೆ ಆರು ವರ್ಷದ ಮಗು ವಿನೋದ … Continued