ಬೆಂಗಳೂರು: ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಇವೆಲ್ಲ ರಾಜಕೀಯ ಪಿತೂರಿಯಿಂದ ಮಹಿಳೆ ಅಪಹರಣ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revannna) ಆರೋಪಿಸಿದ್ದಾರೆ.
ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಎಸ್‌ಐಟಿ (SIT) ಅಧಿಕಾರಿಗಳು ಹಾಜರುಪಡಿಸಲು ಕರೆದೊಯ್ಯುವ ಮುನ್ನ ಬೌರಿಂಗ್ ಆಸ್ಪತ್ರೆಯಲ್ಲಿ ಭಾನುವಾರ ವೈದ್ಯಕೀಯ ತಪಾಸಣೆಗೆ ಒಳಗಾಗುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ನಲವತ್ತು ವರ್ಷಗಳ ರಾಜಕೀಯದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಆದರೂ ನನ್ನ ವಿರುದ್ಧ ರಾಜಕೀಯ ಪಿತೂರಿ ನಡೆಸಿ ದುರುದ್ದೇಶದಿಂದ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಏಪ್ರಿಲ್ 28ಕ್ಕೆ ನನ್ನ ವಿರುದ್ಧ ಎಫ್ಐಆರ್ ದಾಖಲಿಸಿದರು. ಆದರೆ ನನ್ನ ವಿರುದ್ಧ ಯಾವುದೇ ಪುರಾವೆ ಸಿಗಲಿಲ್ಲ. ಹಾಗಾಗೀ ಮೇ2 ರಂದು ಅಪಹರಣ ಪ್ರಕರಣ ದಾಖಲಿಸಿ ಹಾಕಿಸಿ ಬಂಧಿಸಿದ್ದಾರೆ. ರಾಜಕೀಯ ಇತಿಹಾಸದಲ್ಲೇ ಇದು ದೊಡ್ಡ ಷಡ್ಯಂತ್ರವಾಗಿದೆ. ಇದನ್ನು ಎದುರಿಸುವ ಶಕ್ತಿಯಿದೆ ಎಂದು ತಿಳಿಸಿದರು.
ಬಳಿಕ ಆಸ್ಪತ್ರೆಯಲ್ಲಿ ರೇವಣ್ಣ ಅವರಿಗೆ ಆಸ್ಪತ್ರೆಯಲ್ಲಿ ರಕ್ತದೊತ್ತಡ, ಸಕ್ಕರೆ ಪ್ರಮಾಣ, ಇಸಿಜಿ ಮತ್ತಿತರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಬಳಿಕ ಆಸ್ಪತ್ರೆಯಿಂದ ಕೋರಮಂಗಲದಲ್ಲಿರುವ ಜಡ್ಜ್ ನಿವಾಸಕ್ಕೆ ಎಸ್ ಐಟಿ ಅಧಿಕಾರಿಗಳು ಕರೆದೊಯ್ದರು.
ರೇವಣ್ಣ ಕಿಡ್ನಾಪ್ ಪ್ರಕರಣ…
ಎಚ್‌ಡಿ ರೇವಣ್ಣ ಅವರನ್ನು ಬಂಧನಕ್ಕೆ ಮಹಿಳೆಯ ಅಪಹರಣದ ಪ್ರಕರಣದಲ್ಲಿ ಬಂಧಿಸಲಾಗಿದೆ. ನನ್ನ ತಾಯಿಯನ್ನು ಎಚ್‌ಡಿ ರೇವಣ್ಣ ಅವರ ಸೂಚನೆಯಂತೆ ಸತೀಶ ಬಾಬಣ್ಣ ಎಂಬವರು ಅಪಹರಿಸಿದ್ದಾರೆ ಎಂದು ಸತೀಶ ಬಾಬಣ್ಣ ಹಾಗೂ ರೇವಣ್ಣ ವಿರುದ್ಧ ಮೈಸೂರಿನ ಕೆಆರ್ ನಗರದ ಮಹಿಳೆಯೊಬ್ಬರ ಪುತ್ರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ವೇಳೆ ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ರೇವಣ್ಣ ಅವರಿಗೆ ಮಧ್ಯಂತರ ಜಾಮೀನು ನಿರಾಕರಿಸಿತ್ತು. ಅದರ ಬೆನ್ನಿಗೇ ರೇವಣ್ಣ ಅವರನ್ನು ಬಂಧಿಸಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ