ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ

ಬೆಂಗಳೂರು : ಅಶ್ಲೀಲ ವೀಡಿಯೊ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು (ಮೇ 5) ರಾಜ್ಯಕ್ಕೆ ಹಿಂದಿರುಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಪ್ರಜ್ವಲ್ ರೇವಣ್ಣ ಅವರು ಇಂದು, ಭಾನುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯೆತಗಳಿವೆ ಎಂದು ಹೇಳಲಾಗುತ್ತಿದೆ.
ಪೆನ್ ಡ್ರೈವ್ ಹಗರಣದ ವಿಚಾರಣೆಗೆ ಅವರು ಹಾಜರಾಗದ ಹಿನ್ನೆಲೆಯಲ್ಲಿ, ಅವರ ವಿರುದ್ಧ ಈಗಾಗಲೇ ಲುಕ್ ಔಟ್ ನೋಟಿಸ್ ಜಾರಿಯಾಗಿದೆ. ಮಾಹಿತಿಯ ಪ್ರಕಾರ, ಪ್ರಜ್ವಲ್ ರೇವಣ್ಣನವರು ಜರ್ಮನಿಯಿಂದ ಯುಎಇಗೆ ಹೋಗಿದ್ದಾರೆ. ದುಬೈನಿಂದ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.ಮಂಗಳೂರು ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಬಂಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಮಹಿಳೆ ಅಪಹರಣದ ಪ್ರಕರಣದಲ್ಲಿ ಈಗಾಗಲೇ ಅವರ ತಂದೆ ಎಚ್‌.ಡಿ.ರೇವಣ್ಣ ಅವರನ್ನು ಶನಿವಾರ ಸಂಜೆ ಎಸ್‌ಐಟಿ ಬಂಧಿಸಿದೆ.

ಅಲ್ಲದೆ, ಕೊಚ್ಚಿ, ಗೋವಾ, ಬೆಂಗಳೂರು ಯಾವುದೇ ವಿಮಾನ ನಿಲ್ದಾಣಕ್ಕೆ ಬಂದರೂ ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಬಂಧಿಸುವ ಸಾಧ್ಯತೆ ಹೆಚ್ಚಿದೆ. ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಮೇ 30ರಂದು ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ, ಹೊಳೆ ನರಸೀಪುರದ ಶಾಸಕ ಎಚ್.ಡಿ. ರೇವಣ್ಣ ಅವರ ವಿರುದ್ಧ ನೋಟಿಸ್ ಜಾರಿ ಮಾಡಿ 24 ಗಂಟೆಯೊಳಗೆ ವಿಚಾರಣೆಗೆ ಬರುವಂತೆ ಆದೇಶಿಸಿತ್ತು. ಆದರೆ, ಅಷ್ಟರಲ್ಲಾಗಲೇ ವಿದೇಶಕ್ಕೆ ಪ್ರಯಾಣಿಸಿದ್ದ ಪ್ರಜ್ವಲ್ ರೇವಣ್ಣ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ತಾವು ವಿದೇಶದಲ್ಲಿರುವುದರಿಂದ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಬೇಕು ಎಂದು ತಮ್ಮ ವಕೀಲರ ಮೂಲಕ ಕೋರಿದ್ದರು.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement