ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

ಮಂಗಳೂರು : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ.
ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಂ ನಾಶಿಯಾ(14 )ಮೃತ ಬಾಲಕಿಯರು ಎಂದು ಗುರುತಿಸಲಾಗಿದೆ.
ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿದ್ದರು. ಅವರು ಭಾನುವಾರ ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ಸಂಭವಿಸಿದೆ.
ಭಾನುವಾರ ಸಂಜೆ ವೇಳೆ ಮನೆಯವರ ಜೊತೆಗೆ ನಾವೂರಿನ ನೀರಕಟ್ಟೆ ಬಳಿಯ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮಕ್ಕಳು ನೀರಿನಲ್ಲಿ ಆಟ ಆಡುತ್ತಿದ್ದಾಗ ಮನೆಯವರ ಮುಂದೆಯೇ ಎರಡು ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ, ಆದರೆ ಪೋಷಕರಿಗೆ ಈಜು ಬಾರದ ಕಾರಣ ಅವರಿಂದ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement