ಪೇಟಿಎಂ ಸಿಇಒ ಸ್ಥಾನಕ್ಕೆ ಭವೇಶ ಗುಪ್ತಾ ದಿಢೀರ್‌ ರಾಜೀನಾಮೆ

ನವದೆಹಲಿ : ಪೇಟಿಎಂ(Paytm)ನ ಮೂಲ ಕಂಪನಿ ಒನ್‌97 (One97) ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭವೇಶ ಗುಪ್ತಾ ಅವರು ಕಂಪನಿಗೆ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಹೇಳಿಕೆ ಶನಿವಾರ ತಿಳಿಸಿದೆ.
ನಾಯಕತ್ವ ಬದಲಾವಣೆಯ ಭಾಗವಾಗಿ, ಫಿನ್ಟೆಕ್ ಸಂಸ್ಥೆ ಪೇಟಿಎಂ ರಾಕೇಶ್ ಸಿಂಗ್ ಅವರನ್ನು ಪೇಟಿಎಂ ಮನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿದೆ.
ಪಾವತಿ ಮತ್ತು ಸಾಲ ನೀಡುವ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ವೈಯಕ್ತಿಕ ಕಾರಣಗಳಿಂದ ವೃತ್ತಿಜೀವನದಲ್ಲಿ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಕಂಪನಿಯ ನಿರ್ದೇಶಕರ ಮಂಡಳಿಯು ಮೇ 4ರಂದು ನಡೆದ ಸಭೆಯಲ್ಲಿ ಕಂಪನಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ಮೇ 4ರಂದು ಪತ್ರದ ಮೂಲಕ ಸಲ್ಲಿಸಿದ ರಾಜೀನಾಮೆಯನ್ನು ಪುರಸ್ಕರಿಸಿದೆ. ಮೇ 31ರಂದು ಅವರು ಕಂಪನಿಯ ಸೇವೆಯಿಂದ ಬಿಡುಗಡೆ ಹೊಂದಲಿದ್ದಾರೆ.
ನಾಯಕತ್ವ ಬದಲಾವಣೆಯ ಭಾಗವಾಗಿ, ಫಿನ್ಟೆಕ್ ಸಂಸ್ಥೆ ಪೇಟಿಎಂ ರಾಕೇಶ್ ಸಿಂಗ್ ಅವರನ್ನು ಪೇಟಿಎಂ ಮನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿರುವುದಾಗಿ ಕಂಪೆನಿ ಪ್ರಕಟಣೆಯಲ್ಲಿ ತಿಳಿಸಿದೆ.
ಪೇಟಿಎಂ ಮನಿ ಮುಖ್ಯಸ್ಥರಾಗಿದ್ದ ವರುಣ್ ಶ್ರೀಧರ್ ಅವರನ್ನು ಮ್ಯೂಚುವಲ್ ಫಂಡ್ ಮತ್ತು ಇತರ ಸಂಪತ್ತು ನಿರ್ವಹಣಾ ಉತ್ಪನ್ನಗಳ ವಿತರಣೆಯಲ್ಲಿ ವ್ಯವಹರಿಸುವ ಪೇಟಿಎಂ ಸರ್ವೀಸಸ್ ನ ಸಿಇಒ ಆಗಿ ವರ್ಗಾಯಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯಕುಮಾರಗೆ ಕಪಾಳಮೋಕ್ಷ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement