ಮೊಬೈಲ್ ನಲ್ಲಿ ಹುಡುಗರ ಜೊತೆ ಹರಟೆ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಕೊಡಲಿಯಿಂದ ಹೊಡೆದು ಕೊಂದ 14 ವರ್ಷದ ಬಾಲಕಿ…!

ರಾಜನಂದಗಾಂವ್ : ಬುದ್ದಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕಿಯೊಬ್ಬಳು ಅಣ್ಣನನ್ನೇ ಕೊಲೆ ಮಾಡಿದ ಭಯಾನಕ ಘಟನೆ ಛತ್ತೀಸ್ ಗಡದ ಖೈರಗಢ-ಚುಯಿಖಾದನ್-ಗಂಡೈ (ಕೆಸಿಜಿ) ಜಿಲ್ಲೆಯಲ್ಲಿ ನಡೆದಿದೆ.
ಮೊಬೈಲ್ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಬುದ್ಧಿವಾದ ಹೇಳಿದ ನಂತರ ತನ್ನ ಅಣ್ಣನನ್ನು ಕೊಡಲಿಯಿಂದ ಹೊಡೆದು ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಚುಯಿಖಾಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಲಿದಿಹ್ಕಲಾ ಗ್ರಾಮದಲ್ಲಿ ನಡೆದ ಈ ಘಟನೆಯ ನಂತರ 14 ವರ್ಷದ ಬಾಲಕಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಘಟನೆಯ ಸಮಯದಲ್ಲಿ ತಾನು ಮತ್ತು ತನ್ನ ಸಹೋದರ (18) ಮನೆಯಲ್ಲಿದ್ದೆವು ಮತ್ತು ಇತರ ಕುಟುಂಬ ಸದಸ್ಯರು ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.
ಮೊಬೈಲ್ ಫೋನ್‌ನಲ್ಲಿ ಹುಡುಗರೊಂದಿಗೆ ಮಾತನಾಡುತ್ತಿರುವುದಕ್ಕೆ ಆಕೆಯ ಸಹೋದರ ಆಕ್ಷೇಪಿಸಿದ್ದಾನೆ ಮತ್ತು ಇನ್ನು ಮುಂದೆ ಫೋನ್ ಬಳಸಬಾರದು ಎಂದು ಬೈದು ಬುದ್ಧಿವಾದ ಹೇಳಿದ್ದಾನೆ.
ಬೈದಿದ್ದಕ್ಕೆ ಕೋಪಗೊಂಡ ಬಾಲಕಿ ನಿದ್ದೆಗೆ ಜಾರಿದ ತನ್ನ ಸಹೋದರನ ಕುತ್ತಿಗೆಗೆ ಕೊಡಲಿಯಿಂದ ಹೊಡೆದಿದ್ದಾಳೆ. ಆಕೆಯ ಸಹೋದರ ಮಲಗಿದ್ದಲ್ಲೇ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

ನಂತರ ಬಾಲಕಿ ಸ್ನಾನ ಮಾಡಿ ತನ್ನ ಬಟ್ಟೆಯ ಮೇಲಿನ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿದ ನಂತರ ತನ್ನ ಸಹೋದರನನ್ನು ಯಾರೋ ಕೊಲೆ ಮಾಡಲಾಗಿದೆ ಎಂದು ನೆರೆಹೊರೆಯವರಿಗೆ ತಿಳಿಸಿದ್ದಾಳೆ.
ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಬಾಲಕಿ ಆತನನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಹೇಳಿಕೆ ತಿಳಿಸಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement