ಪ್ರಜ್ವಲ್‌ ರೇವಣ್ಣ ಪ್ರಕರಣ : ದೇವೇಗೌಡ, ಎಚ್‌ಡಿಕೆಯನ್ನು ತಪ್ಪಾಗಿ ಬಿಂಬಿಸಿ ಸುದ್ದಿ ಪ್ರಸಾರ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ

ಬೆಂಗಳೂರು : ಜೆಡಿಎಸ್‌ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ಆರೋಪಿತ ಲೈಂಗಿಕ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ ನಕಲಿ ಸುದ್ದಿ, ಚಿತ್ರ ಅಥವಾ ವೀಡಿಯೋ ತಿರುಚಿ ಪ್ರಸಾರ/ ಪ್ರಕಟ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಬೆಂಗಳೂರಿನ ಸತ್ರ ನ್ಯಾಯಾಲಯವು ತಾತ್ಕಾಲಿಕ … Continued

ಅಶ್ಲೀಲ‌ ವೀಡಿಯೊ ಇಟ್ಟುಕೊಳ್ಳುವುದು ಅಪರಾಧ, ಡಿಲೀಟ್‌ ಮಾಡಿ : ಎಸ್‌ಐಟಿ ಮುಖ್ಯಸ್ಥರು

ಬೆಂಗಳೂರು: ಅಶ್ಲೀಲ ವೀಡಿಯೊಗಳನ್ನು ಜನರು ತಮ್ಮ ಬಳಿ ಇಟ್ಟುಕೊಳ್ಳುವುದು ಕೂಡ ಅಪರಾಧ ಎಂದು ಹಾಸನ ಪೆನ್‌ಡ್ರೈವ್‌ ಪ್ರಕರಣದ ಕುರಿತ ವಿಚಾರಣೆಗೆ ರಚನೆಯಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಖ್ಯಸ್ಥರು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ” ಮಾಹಿತಿ ಮತ್ತು ತಂತ್ರಜ್ಞಾನ ಅಧಿನಿಯಮದಲ್ಲಿ ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ, ಪ್ರಸಾರ ಮಾಡುವ … Continued

ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೇ 7ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೇ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ … Continued

ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಆರೋಪಿತ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಬಸವನಗುಡಿಯಲ್ಲಿರುವ ಎಚ್.ಡಿ. ರೇವಣ್ಣ ನಿವಾಸಕ್ಕೆ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಸೋಮವಾರ ಬೆಳಿಗ್ಗೆ ರೇವಣ್ಣ ಅವರ ನಿವಾಸಕ್ಕೆ ನಾಲ್ವರು ಮಹಿಳಾ ಅಧಿಕಾರಿಗಳು ಸೇರಿದಂತೆ ೬ ಮಂದಿ ಅಧಿಕಾರಿಗಳು ಆಗಮಿಸಿ ಸಂತ್ರಸ್ತೆಯನ್ನು ಕರೆತಂದರು. ನಂತರ ಸಂತ್ರಸ್ತೆ ಹೇಳಿಕೆ … Continued

ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

ಬೆಂಗಳೂರು : ವಿದೇಶದಲ್ಲಿರುವ ಲೈಂಗಿಕ ದೌರ್ಜನ್ಯ ವೀಡಿಯೊದ ಪ್ರಕರಣ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಮೇ 7ರಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ನಂತರ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ದಿನವೇ, ಅಂದರೆ ಏಪ್ರಿಲ್ 26ರ ಮಧ್ಯರಾತ್ರಿಯೇ ಪ್ರಜ್ವಲ್‌ … Continued

ವೀಡಿಯೊ..| ರಸ್ತೆಬದಿ ರೋಲ್‌ ಮಾರುವ 10 ವರ್ಷದ ಬಾಲಕನ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ; ಸ್ಫೂರ್ತಿಯೂ ಹೌದು; ಸಹಾಯ ಮಾಡುವೆ ಎಂದ ಆನಂದ ಮಹೀಂದ್ರಾ

ನವದೆಹಲಿ : ಮಹೀಂದ್ರಾ ಗ್ರೂಪ್‌ ಅಧ್ಯಕ್ಷ ಆನಂದ ಮಹೀಂದ್ರಾ ಅವರು ರಸ್ತೆ ಬದಿಯ ಸ್ಟಾಲ್‌ನಲ್ಲಿ ರೋಲ್‌ಗಳನ್ನು ಮಾರಾಟ ಮಾಡುತ್ತಿರುವ 10 ವರ್ಷದ ಬಾಲಕನ ವೀಡಿಯೊವನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, ವೈರಲ್ ವೀಡಿಯೊದಲ್ಲಿ ಕಂಡುಬರುವ 10 ವರ್ಷದ ಬಾಲಕ ಜಸ್‌ಪ್ರೀತ್‌ಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಮಿದುಳಿನ ಕ್ಷಯರೋಗದಿಂದ ಕೆಲವು ದಿನಗಳ ಹಿಂದೆ ತಂದೆ ಮರಣಹೊಂದಿದ ನಂತರ ಈ … Continued

ನೂಪುರ್ ಶರ್ಮಾ ಸೇರಿದಂತೆ ಹಲವು ಹಿಂದೂ ನಾಯಕರ ಹತ್ಯೆಗೆ ಸಂಚು: ಮೌಲ್ವಿ ಬಂಧನ

ಸೂರತ್: ಪಾಕಿಸ್ತಾನ ಮತ್ತು ನೇಪಾಳದ ಹ್ಯಾಂಡ್ಲರ್‌ಗಳೊಂದಿಗೆ ಶಾಮೀಲಾಗಿ ಬಿಜೆಪಿ ನಾಯಕರನ್ನು ಮತ್ತು ಬಲಪಂಥೀಯ ಸಂಘಟನೆಯ ಪ್ರಮುಖರೊಬ್ಬರನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ 27 ವರ್ಷದ ಮೌಲ್ವಿಯನ್ನು ಗುಜರಾತ್‌ನ ಸೂರತ್‌ನಲ್ಲಿ ಮೇ 3 ರಂದು ಬಂಧಿಸಲಾಗಿದೆ. ಆರೋಪಿ ಮೌಲ್ವಿ ಸೊಹೆಲ್ ಅಬುಬಕರ್ ತಿಮೋಲ್ ಎಂಬಾತ ಹಿಂದಿ ಟಿವಿ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ, ಬಿಜೆಪಿಯ ತೆಲಂಗಾಣ … Continued

ವೀಡಿಯೊ…| ಇಂಟರ್ನೆಟ್ ನಲ್ಲಿ ಭಾರೀ ಗಮನ ಸೆಳೆದ ರೋಬೋಟ್ ನಾಯಿ ಡ್ಯಾನ್ಸ್‌ ಮಾಡುವ ವೀಡಿಯೊ

ಅಮೆರಿಕ ಮೂಲದ ರೊಬೊಟಿಕ್ಸ್ ಕಂಪನಿಯೊಂದು ಬಿಡುಗಡೆ ಮಾಡಿರುವ ರೋಬೋಟ್ ಶ್ವಾನದ ವೀಡಿಯೋ ಅಂತರ್ಜಾಲದಲ್ಲಿ ಭಾರೀ ಗಮನ ಸೆಳೆದಿದೆ. ವೀಡಿಯೊ ಕ್ಲಿಪ್ ಬೋಸ್ಟನ್ ಡೈನಾಮಿಕ್ಸ್ ರಚಿಸಿದ ಸ್ಪಾರ್ಕಲ್ಸ್ ಎಂಬ ರೋಬೋಟ್ ನಾಯಿಯನ್ನು ತೋರಿಸುತ್ತದೆ. ಇದು ಸ್ಪಾಟ್ ಹೆಸರಿನ ಮತ್ತೊಂದು ಯಂತ್ರದೊಂದಿಗೆ ನೃತ್ಯ ಮಾಡುತ್ತಿದೆ. ಈ ವೀಡಿಯೊವನ್ನು ಅಂತಾರಾಷ್ಟ್ರೀಯ ನೃತ್ಯ ದಿನದಂದು ಬಿಡುಗಡೆ ಮಾಡಲಾಯಿತು. ಬೋಸ್ಟನ್ ಡೈನಾಮಿಕ್ಸ್ ಕಂಪನಿಯು … Continued

ಸಿದ್ದಾಪುರ : ಮಂಗನ ಕಾಯಿಲೆಗೆ ಐದು ವರ್ಷದ ಬಾಲಕಿ ಸಾವು

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಶಂಕಿತ ಮಂಗನಕಾಯಿಲೆ (ಕೆಎಫ್‌ಡಿ)ಗೆ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ. ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರೆಂದೂರಿನ ಐದು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾಳೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿ ಸಾವಿನಿಂದ … Continued

ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ, ಹಣದ ರಾಶಿ ನೋಡಿ ಇ.ಡಿ.ಯೇ ದಂಗು

ರಾಂಚಿ: ಜಾರ್ಖಂಡ್ ಸಚಿವ ಅಲಂಗೀರ್ ಆಲಮ್‌ ಅವರ ಆಪ್ತ ಕಾರ್ಯದರ್ಶಿ ಸಂಜೀವ ಲಾಲ ಮನೆ ಸೇರಿದಂತೆ ರಾಂಚಿಯ ಅನೇಕ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ಆರಂಭಿಸಿದೆ. ದಾಳಿ ವೇಳೆ ಸಂಜೀವ ಲಾಲ ಅವರ ಮನೆಯ ಸಹಾಯಕನಿಂದ ಅ 20 ರಿಂದ 30 ಕೋಟಿ ರೂಪಾಯಿ ಎಂದು ಅಂದಾಜಿಸಲಾದ ಬೃಹತ್ ಮೊತ್ತದ ನಗದು ಪತ್ತೆಯಾಗಿದೆ. ಎಣಿಕೆಯನ್ನು … Continued