ಅಶ್ಲೀಲ‌ ವೀಡಿಯೊ ಇಟ್ಟುಕೊಳ್ಳುವುದು ಅಪರಾಧ, ಡಿಲೀಟ್‌ ಮಾಡಿ : ಎಸ್‌ಐಟಿ ಮುಖ್ಯಸ್ಥರು

ಬೆಂಗಳೂರು: ಅಶ್ಲೀಲ ವೀಡಿಯೊಗಳನ್ನು ಜನರು ತಮ್ಮ ಬಳಿ ಇಟ್ಟುಕೊಳ್ಳುವುದು ಕೂಡ ಅಪರಾಧ ಎಂದು ಹಾಸನ ಪೆನ್‌ಡ್ರೈವ್‌ ಪ್ರಕರಣದ ಕುರಿತ ವಿಚಾರಣೆಗೆ ರಚನೆಯಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಖ್ಯಸ್ಥರು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ” ಮಾಹಿತಿ ಮತ್ತು ತಂತ್ರಜ್ಞಾನ ಅಧಿನಿಯಮದಲ್ಲಿ ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ, ಪ್ರಸಾರ ಮಾಡುವ ವ್ಯಕ್ತಿಗಳನ್ನು ಸಂದೇಶದ ರಚನಾಕಾರರು ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಯಾರಾದರೂ ತಮ್ಮ ಬಳಿ ಅಶ್ಲೀಲ ವಿಡಿಯೋ, ಚಿತ್ರಗಳು ಹಾಗೂ ಧ್ವನಿ ಮುದ್ರಣಗಳನ್ನು ಇಟ್ಟುಕೊಂಡಿದ್ದರೂ ಅದು ಅಪರಾಧವಾಗುತ್ತದೆ. ಕಾರಣ ಜನರು ಯಾವುದೇ ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಡಿಯೋ ಹಾಗೂ ಚಿತ್ರಗಳನ್ನು ಇಟ್ಟುಕೊಳ್ಳುವುದನ್ನು ಅಥವಾ ಪ್ರಸಾರ ಮಾಡುವುದನ್ನು ನಿರ್ಬಂಧಿಸಿಕೊಳ್ಳುವುದು ಸೂಕ್ತ ಎಂದು ತಿಳಿಸಿದ್ದಾರೆ.
ಒಂದು ವೇಳೆ ಅಂತಹ ವೀಡಿಯೊ, ಚಿತ್ರಗಳು ಮತ್ತು ಧ್ವನಿ ಮುದ್ರಣಗಳನ್ನು ತಮ್ಮ ಮೊಬೈಲ್ ಅಥವಾ ಇತರೆ ಸಾಧನಗಳಲ್ಲಿ ಹೊಂದಿದ್ದರೆ ‘ಡಿಲೀಟ್’ ಮಾಡುವುದರಿಂದ ಕಾನೂನಿನ ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಸಿಐಡಿ ವಿಶೇಷ ತನಿಖಾ ತಂಡ ಮುಖ್ಯಸ್ಥರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement