ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಎಸ್‌ಐಟಿ

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ಆರೋಪಿತ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಬಸವನಗುಡಿಯಲ್ಲಿರುವ ಎಚ್.ಡಿ. ರೇವಣ್ಣ ನಿವಾಸಕ್ಕೆ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ಸೋಮವಾರ ಬೆಳಿಗ್ಗೆ ರೇವಣ್ಣ ಅವರ ನಿವಾಸಕ್ಕೆ ನಾಲ್ವರು ಮಹಿಳಾ ಅಧಿಕಾರಿಗಳು ಸೇರಿದಂತೆ ೬ ಮಂದಿ ಅಧಿಕಾರಿಗಳು ಆಗಮಿಸಿ ಸಂತ್ರಸ್ತೆಯನ್ನು ಕರೆತಂದರು. ನಂತರ ಸಂತ್ರಸ್ತೆ ಹೇಳಿಕೆ ಸೇರಿದಂತೆ ಎಲ್ಲ ರೀತಿಯ ಮಹಜರು ಪ್ರಕ್ರಿಯೆಯನ್ನು ಚಿತ್ರೀಕರಣ ಮಾಡಲಾಯಿತು.

ಮಹಜರು ನಡೆಸುವ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ರೇವಣ್ಣ ನಿವಾಸದ ಸುತ್ತ ಬ್ಯಾರಿಕೇಡ್ ಅಳವಡಿ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದರು.
ರೇವಣ್ಣ ತಮ್ಮ ಕೊಠಡಿಗೆ ಬರುವಂತೆ ಆಹ್ವಾನಿಸಿ ಹಣ್ಣು ಕೊಡುವ ನೆಪದಲ್ಲಿ ಮೈಕೈ ಮುಟ್ಟುತ್ತಿದ್ದರು. ಮನೆಯ ಸ್ಟೋರ್ ರೂಂನಲ್ಲಿ ಕೈ ಹಿಡಿದು ಎಳೆಯುತ್ತಿದ್ದರು ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದರು.
ತನ್ನ ಮಗಳ ಫೋನ್ ಗೆ ಹಲವು ಭಾರಿ ಪ್ರಜ್ವಲ್ ರೇವಣ್ಣ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ಮಾತನಾಡುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದರು. ದೂರಿನ ಅನ್ವಯ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ಕಿರುಕುಳ ಸೆಕ್ಷನ್ ಅಡಿ ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement