ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೇ 7ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೇ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಮೇ 7ರಂದು ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಮೇ 8ಕ್ಕೆ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ವಿಜಯನಗರ , ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮೀಣ ಹಾಗೂ ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲ ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಂದು ಹೇಳಿದೆ.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಮೇ 9ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಳೆಯಾಗಲಿದ್ದರೆ, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಐಎಂಡಿ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ. ಮೇ 10ರಂದು ಉತ್ತರ ಕನ್ನಡ , ದಕ್ಷಿಣ ಕನ್ನಡ, ಉಡುಪಿ, ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು ಮೊದಲಾದ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement