ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

ಬೆಂಗಳೂರು : ವಿದೇಶದಲ್ಲಿರುವ ಲೈಂಗಿಕ ದೌರ್ಜನ್ಯ ವೀಡಿಯೊದ ಪ್ರಕರಣ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಮೇ 7ರಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ನಂತರ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ದಿನವೇ, ಅಂದರೆ ಏಪ್ರಿಲ್ 26ರ ಮಧ್ಯರಾತ್ರಿಯೇ ಪ್ರಜ್ವಲ್‌ ರೇವಣ್ಣ ಅವರು ರಾಜತಾಮತ್ರಿಕ ವೀಸಾ ಬಳಸಿ ವಿದೇಶಕ್ಕೆ ಹಾರಿದ್ದಾರೆ.
ಮೇ 5ರಂದೇ ಪ್ರಜ್ವಲ್ ರಾಜ್ಯಕ್ಕೆ ಆಗಮಿಸಬಹುದು ಎಂದು ಸುದ್ದಿಯಾಗಿತ್ತು. ಬೆಂಗಳೂರು, ಮಂಗಳೂರು, ಗೋವಾ ಅಥವಾ ಕೊಚ್ಚಿ ಏರ್​ಪೋರ್ಟ್​ಗಳಲ್ಲಿ ಎಸ್​ಐಟಿ ಅಧಿಕಾರಿಗಳು ಕಾದು ಕುಳಿತಿದ್ದರು. ಆದ್ರೆ ಪ್ರಜ್ವಲ್ ಬರಲಿಲ್ಲ. ಇತ್ತೀಚಿನ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮೇ 7ರಂದು ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದ್ದು, ಅದರ ನಂತರ ದೇಶಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement