ಸಿದ್ದಾಪುರ : ಮಂಗನ ಕಾಯಿಲೆಗೆ ಐದು ವರ್ಷದ ಬಾಲಕಿ ಸಾವು

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಶಂಕಿತ ಮಂಗನಕಾಯಿಲೆ (ಕೆಎಫ್‌ಡಿ)ಗೆ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ. ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅರೆಂದೂರಿನ ಐದು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾಳೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಾಲಕಿ ಸಾವಿನಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷ ಜನವರಿಯಿಂದ ಈವರೆಗೆ ಒಂಬತ್ತು ಮಂದಿ ಮಂಗನಕಾಯಿಲೆಗೆ ಸಾವಿಗೀಡಾದಂತಾಗಿದ್ದು, ಸಿದ್ದಾಪುರ ತಾಲೂಕಿನಲ್ಲಿಯೇ ಎಂಟು ಮಂದಿ ಮೃತಪಟ್ಟಿದ್ದಾರೆ. ಶಿರಸಿ ತಾಲೂಕಿನಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಈ ವರ್ಷ ಸಿದ್ದಾಪುರ ತಾಲ್ಲೂಕಿನಲ್ಲೇ ಸುಮಾರು 90 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಇತರ ತಾಲ್ಲೂಕುಗಳಲ್ಲಿ ಒಟ್ಟು 99 ಪ್ರಕರಣಗಳು ಈವರೆಗೆ ಪತ್ತೆಯಾಗಿವೆ ಎನ್ನಲಾಗಿದೆ.

 

ನಿ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement