ಎಚ್.ಡಿ ರೇವಣ್ಣ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ (HD Revanna) ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಅವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ದಾಖಲು ಮಾಡಲಾಗಿದೆ. ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರಿಗೆ ಎದೆನೋವು ಹಾಗೂ ಹೊಟ್ಟೆ ಉರಿ ಹಾಗೂ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ನಾಲ್ಕು ದಿನಗಳಿಂದ ಎಸ್‌ಐಟಿ ವಶದಲ್ಲಿರುವ ರೇವಣ್ಣ ಸರಿಯಾಗಿ ಊಟ, ನಿದ್ದೆ ಮಾಡಿಲ್ಲ. ಹೀಗಾಗಿ. ಅಸಿಡಿಟಿಯಿಂದ ಎದೆನೋವು ಕಾಣಿಸಿಕೊಂಡಿದೆ. ಮಧ್ಯಾಹ್ನದಿಂದ ಹೊಟ್ಟೆ ಉರಿ ಹಾಗೂ ಎದೆನೋವು ಅಂದಿದ್ದ ರೇವಣ್ಣರನ್ನು, ಮೊದಲಿಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗೆ ಒಳಪಡಿಸಿದ್ದರು. ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದೆ.

ತಪಾಸಣೆ ನಡೆಸಿದ ವೈದ್ಯರು, ರೇವಣ್ಣ ಅವರಿಗೆ ಗ್ಯಾಸ್‌ಟ್ರಿಕ್‌ ಹಾಗೂ ಜತೆಗೆ ಹರ್ನಿಯಾ ಸಮಸ್ಯೆಯೂ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಹೀಗಾಗಿ ಆಸ್ಪತ್ರೆ ದಾಖಲಿಸಲು ವೈದ್ಯರು ಸೂಚನೆ ನೀಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಯಾರಿಕೇಡ್ ಗಳನ್ನ ಹಾಕಿ ಪೊಲೀಸರು ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಜ್ವಲ್​ ರೇವಣ್ಣ ಕೇಸ್​​ನ ಸಂತ್ರಸ್ತ ಮಹಿಳೆಯೊಬ್ಬರನ್ನು ಕಿಡ್ನ್ಯಾಪ್​ ಮಾಡಿರುವ ಆರೋಪದಡಿಯಲ್ಲಿ ಮಾಜಿ ಸಚಿವ ಎಚ್​ಡಿ ರೇವಣ್ಣರನ್ನು ಬಂಧಿಸಲಾಗಿದೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement