‘ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ’ : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

ಮಾಲೆ : ಭಾರತ ಮತ್ತು ಮಾಲ್ಡೀವ್ಸ್‌ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದೆ. ಹೀಗಾಗಿ ಮಾಲ್ಡೀವ್ಸ್ ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ತೀವ್ರವಾಗಿ ಕುಸಿದಿದೆ. ಹೀಗಾಗಿ ಪ್ರವಾಸೋದ್ಯಮವನ್ನೇ ನಂಬಿಕೊಂಡಿರುವ ಮಾಲ್ಡೀವ್ಸ್‌ಗೆ ಆರ್ಥಿಕವಾಗಿ ಹಿನ್ನಡೆಯಾಗಿದ್ದು, ಈಗ ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್ ಅವರು ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ಆರ್ಥಿಕತೆಯನ್ನು ಬೆಂಬಲಿಸಿ ಎಂದು ಭಾರತೀಯರಿಗೆ ಮನವಿ ಮಾಡಿದ್ದಾರೆ.
ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಐತಿಹಾಸಿಕ ಸಂಬಂಧಗಳ ಬಗ್ಗೆ ಮಾತನಾಡಿದ ಅವರು, ನಮಗೆ ಇತಿಹಾಸವಿದೆ. ಹೊಸದಾಗಿ ಚುನಾಯಿತರಾದ ನಮ್ಮ ಸರ್ಕಾರ ಕೂಡ ಭಾರತದೊಂದಿಗೆ ಕೆಲಸ ಮಾಡಲು ಬಯಸುತ್ತದೆ. ನಾವು ಯಾವಾಗಲೂ ಶಾಂತಿ ಮತ್ತು ಸೌಹಾರ್ದ ವಾತಾವರಣವನ್ನು ಉತ್ತೇಜಿಸುತ್ತೇವೆ. ನಮ್ಮ ಜನರು ಮತ್ತು ಸರ್ಕಾರವು ಭಾರತೀಯರ ಆಗಮನಕ್ಕೆ ಆತ್ಮೀಯವಾಗಿ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.
ಪ್ರವಾಸೋದ್ಯಮ ಸಚಿವನಾಗಿ, ದಯವಿಟ್ಟು ಮಾಲ್ಡೀವ್ಸ್‌ನ ಪ್ರವಾಸೋದ್ಯಮದ ಭಾಗವಾಗಿ ಎಂದು ನಾನು ಭಾರತೀಯರಿಗೆ ಹೇಳಲು ಬಯಸುತ್ತೇನೆ. ನಮ್ಮ ಆರ್ಥಿಕತೆಯು ಪ್ರವಾಸೋದ್ಯಮದ ಮೇಲೆ ಅವಲಂಬಿತವಾಗಿದೆ ಎಂದು ಅವರು ಹೇಳಿದ್ದಾರೆ.

ಮಾಲ್ಡೀವ್ಸ್‌ನ ಮೂವರು ಅಧಿಕಾರಿಗಳು ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ನಂತರ ಮಾಲ್ಡೀವ್ಸ್ ಹಾಗೂ ಭಾರತದ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣಗೊಂಡಿದೆ. ಮಾಲ್ಡೀವ್ಸ್‌ ಪ್ರವಾಸಕ್ಕೆ ಬಹಿಷ್ಕಾರಕ್ಕೆ ಕರೆ ನೀಡಿದ ಸಾಮಾಜಿಕ ಮಾಧ್ಯಮ ಅಭಿಯಾನದ ನಂತರ ಅದು ಮಾಲ್ಡೀವ್ಸ್‌ ಪ್ರವಾಸೋದ್ಯಮದಲ್ಲಿ ಗಮನಾರ್ಹ ಕುಸಿತಕ್ಕೆ ಕಾರಣವಾಯಿತು, ಮಾಲ್ಡೀವ್ಸ್‌ಗೆ ಭೇಟಿ ನೀಡುವುದರಲ್ಲಿ ಮೊದಲನೇ ಸ್ಥಾನದಲ್ಲಿದ್ದ ಭಾರತದ ಪ್ರವಾಸಿಗರ ಸಂಖ್ಯೆ ಈಗ ಆರನೇ ಸ್ಥಾನಕ್ಕೆ ಕುಸಿದಿದೆ.

ಪ್ರಮುಖ ಸುದ್ದಿ :-   'ಐಸ್‌ಕ್ರೀಂ ಮ್ಯಾನ್‌' ಖ್ಯಾತಿಯ ನ್ಯಾಚುರಲ್ಸ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ ಕಾಮತ್ ನಿಧನ

ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ಭಾರತೀಯ ಪ್ರವಾಸಿಗರ ಆಗಮನದಲ್ಲಿ 42% ಇಳಿಕೆಯಾಗಿದೆ ಎಂದು ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳು ಬಹಿರಂಗಪಡಿಸುತ್ತವೆ. ಮಾಲ್ಡೀವ್ಸ್‌ನಲ್ಲಿ ನೆಲೆಸಿರುವ ಭಾರತೀಯ ಸೇನಾ ಸಿಬ್ಬಂದಿಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಒಳಗೊಂಡಂತೆ ಅಧ್ಯಕ್ಷ ಮೊಹಮದ್ ಮುಯಿಝು ಅವರ ಆಡಳಿತದ ಚೀನಾ ಪರ ನಿಲುವು ಹಾಗೂ ಮಾಲ್ಡೀವ್ಸ್‌ ಕೆಲ ಸಚಿವರು ಹಾಗೂ ಅಧಿಕಾರಿಗಳು ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆಗಳ ನಂತರ ೆರಡು ದೇಶಗಳ ನಡುವೆ ಸಂಬಂಧಗಳು ಮತ್ತಷ್ಟು ಹದಗೆಟ್ಟಿವೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement