ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣ : ಡಿಕೆ ಶಿವಕುಮಾರ ವಿರುದ್ಧ ಪೋಸ್ಟರ್‌ ಸಮರ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ತೀವ್ರ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ ವಿರುದ್ಧ ಷಡ್ಯಂತ್ರದ ಆರೋಪ ಕೇಳಿಬಂದ ನಂತರ ನಗರದ ಕೆಲವು ಕಡೆಗಳಲ್ಲಿ ಅವರ ವಿರುದ್ಧ ಪೋಸ್ಟರ್ ಅಂಟಿಸಲಾಗಿದೆ.
ನಗರದ ಲೂಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ ಆಗಂತುಕರು ಪೋಸ್ಟರ್ ಅಂಟಿಸಿದ್ದಾರೆ. ಪೋಸ್ಟರ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧ ಕಿಡಿಕಾರಲಾಗಿದೆ‌. ಅದರಲ್ಲಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಫೋಟೋ ಸಹ ಇದೆ. ಡಿಕೆ ಶಿವಕುಮಾರ ಹಾಗೂ ಸಿದ್ದರಾಮಯ್ಯ ವಿರುದ್ಧದ ಪೋಸ್ಟರ್ ಅಭಿಯಾನದ ಹಿನ್ನೆಲೆಯಲ್ಲಿ ಹಾಕಲಾಗಿದ್ದ ಪೋಸ್ಟರ್ ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಆದರೆ ಯಾರು ಇದನ್ನು ಹಾಕಿದ್ದಾರೆ ಎಂಬುದು ಗೊತ್ತಾಗಿಲ್ಲ.
ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯವಾಗಿ ಸಾಕಷ್ಟು ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಪೆನ್‌ ಡ್ರೈವ್‌ ಲೀಕ್‌ ಹಿಂದೆ ಡಿಕೆ ಶಿವಕುಮಾರ ಇದ್ದಾರೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.ಇದನ್ನು ಡಿಕೆಶಿ ನಿರಾಕರಣೆ ಮಾಡಿದ್ದಾರೆ. ಪೆನ್ ಡ್ರೈವ್ ವೀಡಿಯೊ ಬಿಡುಗಡೆ ಹಿಂದೆ ಬಿಜೆಪಿ ಕೈವಾಡ ಇದೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ಜಾತ್ರಾ ಮಹೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಇಬ್ಬರು ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement