ಅಪರೂಪದ ಮದುವೆ; 2ನೇ ವಿಶ್ವ ಮಹಾಯುದ್ಧದ ಸೇನಾನಿ, 100 ವರ್ಷದ ವ್ಯಕ್ತಿಯೇ ಮದುವೆ ಗಂಡು ….ವಧುವಿಗೆ 96 ವರ್ಷ…!

ಬೊಕಾ ರಾಟನ್: ಅಮೆರಿಕನ್ನರಾದ ಹೆರಾಲ್ಡ್ ಟೆರೆನ್ಸ್ ಮತ್ತು ಜೀನ್ ಸ್ವೆರ್ಲಿನ್ ಅವರ ಪ್ರಣಯವು “ರೋಮಿಯೋ ಮತ್ತು ಜೂಲಿಯೆಟ್‌ಗಿಂತ ಕಡಿಮೆಯೇನಿಲ್ಲ” ಎಂದು ಈ ಜೋಡಿ ಹೇಳಿಕೊಳ್ಳುತ್ತದೆ. ಯಾಕೆಂದರೆ ಹೆರಾಲ್ಡ್ ಟೆರೆನ್ಸ್ ಅವರಿಗೆ 100 ವರ್ಷ, ಜೀನ್ ಸ್ವೆರ್ಲಿನ್ ವಯಸ್ಸು 96, ಮತ್ತು ಅವರು ಮುಂದಿನ ತಿಂಗಳು ಫ್ರಾನ್ಸ್‌ನಲ್ಲಿ ಮದುವೆಯಾಗಲಿದ್ದಾರೆ. ಯಾಕೆಂದರೆ ಎರಡನೇ ಮಹಾಯುದ್ಧದ ಸಮಯದಲ್ಲಿ ವರ ಫ್ರಾನ್ಸ್‌ನಲ್ಲಿ … Continued

ಜನಾಂಗೀಯ ಕಾಮೆಂಟ್‌ ವಿವಾದದ ಬೆನ್ನಲ್ಲೇ ಇಂಡಿಯನ್‌ ಓವರ್‌ಸೀಸ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ಯಾಮ್‌ ಪಿತ್ರೋಡಾ

ನವದೆಹಲಿ : ಲೋಕಸಭೆ ಚುನಾವಣೆ ವೇಳೆ ತಮ್ಮ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಕಾಂಗ್ರೆಸ್ಸಿನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷದ ಸಂವಹನ ಉಸ್ತುವಾರಿ ಜೈರಾಮ ರಮೇಶ ಅವರು ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ. ” ಸ್ಯಾಮ್ ಪಿತ್ರೋಡಾ … Continued

ಗೋಪಾಲಕೃಷ್ಣ ಭಟ್ಟ ನಿಧನ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ  ಸಿದ್ದಾಪುರ  ತಾಲೂಕಿನ ವಾಜಗದ್ದೆ ಸಮೀಪದ ಗೊಡ್ವೆಮನೆಯ ಗೋಪಾಲಕೃಷ್ಣ ಸುಬ್ರಾಯ ಭಟ್ಟ (59) ಮೇ 7ರಂದು  ನಿಧನರಾಗಿದ್ದಾರೆ. ಅವರು ಪತ್ನಿ, ಓರ್ವ ಪುತ್ರ, ತಾಯಿ, ಮೂವರು ಸಹೋದರರು,ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತುಮಕೂರಿನ ಸಾಕೇತ್ ಅಟೋಮೊಬೈಲ್ಸ್‌ನಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಹೃದಯಸ್ಥಂಭನದಿಂದ ಹಠಾತ್ತಾಗಿ ನಿಧನರಾಗಿದ್ದಾರೆ. ಅವರ … Continued

ಪ್ರಚೋದನಾಕಾರಿ ವೀಡಿಯೊ : ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ನಡ್ಡಾ, ವಿಜಯೇಂದ್ರಗೆ ಪೊಲೀಸ್‌ ನೋಟಿಸ್‌

ಬೆಂಗಳೂರು : ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ , .ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರಿಗೆ ಬೆಂಗಳೂರಿನ … Continued

ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ(79) ಇಂದು, ಬುಧವಾರ (ಏಪ್ರಿಲ್‌  8) ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೇದೆ ಸುಬ್ಬ ಪೂಜಾರಿ ಮತ್ತು ದೇವಕಿ ದಂಪತಿಯ ಪ್ರಥಮ ಪುತ್ರರಾಗಿ 1946ರ ಜನವರಿ 15ರಂದು ಜನಿಸಿದ ಅವರು … Continued

ದ್ವೇಷ ಭಾಷಣ : ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ ; ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ಚೆನ್ನೈ: ಲೋಕಸಭಾ ಚುನಾವಣೆ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವರಣೆ ಪಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಕಾಂಗ್ರೆಸ್‌ ಸಮಿತಿ (ಟಿಎನ್‌ಸಿಸಿ) ಮದ್ರಾಸ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಧಾನಿ ಮೋದಿಯವರ ದ್ವೇಷ ಭಾಷಣಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಹಲವು ದೂರುಗಳನ್ನು ಸಲ್ಲಿಸಿದ್ದರೂ, ನೇರವಾಗಿ ನರೇಂದ್ರ … Continued

ವೀಡಿಯೊ..| ದಕ್ಷಿಣ ಭಾರತದವರು ಆಫ್ರಿಕನ್ನರಂತೆ, ಪೂರ್ವ ಭಾರತದವರು ಚೀನಿಗಳಂತೆ ಕಾಣ್ತಾರೆ….: ಭಾರೀ ವಿವಾದ ಸೃಷ್ಟಿಸಿದ ಪಿತ್ರೋಡಾ ಹೇಳಿಕೆ ; ಕಾಂಗ್ರೆಸ್ಸಿಗೆ ಮುಜುಗರ

ನವದೆಹಲಿ : ಸಾಗರೋತ್ತರ ಕಾಂಗ್ರೆಸ್​ ಅಧ್ಯಕ್ಷ ಸ್ಯಾಮ್ ಪಿತ್ರೋಡಾ(Sam Pitroda) ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘‘ಪೂರ್ವ ಭಾರತದವರು, ಚೀನೀಯರಂತೆಯೂ ದಕ್ಷಿಣ ಭಾರತದವರು ಆಫ್ರಿಕನ್ನರಂತೆಯೂ ಹಾಗೂ ಪಶ್ಚಿಮ ಭಾರತದವರು ಅರಬ್ಬರಂತೆಯೂ ಕಾಣುತ್ತಾರೆ’’ ಎಂದು ಆಂಗ್ಲ ಪತ್ರಿಕೆ ದಿ ಸ್ಟೇಟ್ಸ್‌ಮನ್‌ಗೆ ನೀಡಿದ ಸಂದರ್ಶನದಲ್ಲಿ ಸ್ಯಾಮ್ ಪಿತ್ರೋಡಾ ಹೇಳಿರುವುದು ಈಗ ಲೋಕಸಭಾ ಚುನಾವಣೆ ಮಧ್ಯೆ ಭಾರೀ ವಿವಾದ ಸೃಷ್ಟಿಸಿದೆ. … Continued

ಎಚ್.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ

ಬೆಂಗಳೂರು : ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಕೋರ್ಟ್‌ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಮಹಿಳೆ ಅಪಹರಣ ಆರೋಪದ ಮೇಲೆ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು, ಬುಧವಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ರೇವಣ್ಣ … Continued

ನಾಳೆ (ಮೇ 9) ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟ ; ಫಲಿತಾಂಶ ಎಲ್ಲಿ ನೋಡುವುದು..? ಇಲ್ಲಿದೆ ಮಾಹಿತಿ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam) ಫಲಿತಾಂಶವು ಮೇ 9ರ ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅನ್ನು ದಿನಾಂಕ: 25.03.2024 … Continued

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಭಾರೀ ಟ್ವಿಸ್ಟ್​; ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಜೊತೆ ಕಾರ್ತಿಕ ಫೋಟೋಗಳು ವೈರಲ್‌..!

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವೀಡಿಯೊ ಪೆನ್​ಡ್ರೈವ್ ಪ್ರಕರಣ ತಿರುವುಗಳ ಮೇಲೆ ಪಡೆಯುತ್ತಿದೆ. ಈಗ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದ್ದು, ಪ್ರಜ್ವಲ್ ರೇವಣ್ಣ ಕುಟುಂಬದ ಮಾಜಿ ಕಾರು ಚಾಲಕ ಕಾರ್ತಿಕ ಹಾಸನ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರನ್ನು ಭೇಟಿಯಾಗಿರುವ ಫೋಟೊಗಳು ಹರಿದಾಡುತ್ತಿವೆ. ತನಗೆ ಪ್ರಜ್ವಲ್ ರೇವಣ್ಣ … Continued