ಎಚ್.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ

ಬೆಂಗಳೂರು : ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಕೋರ್ಟ್‌ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ
ಮಹಿಳೆ ಅಪಹರಣ ಆರೋಪದ ಮೇಲೆ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು, ಬುಧವಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ರೇವಣ್ಣ ಅವರಿಗೆ 7 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಮಹಿಳೆ ಮೇಲೆ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ರೇವಣ್ಣ ಅವರು ಎ1 ಆರೋಪಿಯಾಗಿದ್ದಾರೆ. ಹೀಗಾಗಿ ರೇವಣ್ಣರ ಹೆಚ್ಚಿನ ವಿಚಾರಣೆ ಅವಶ್ಯಕತೆ ಇದೆ ಎಂದು ಎಸ್‌ಐಟಿ ಅಧಿಕಾರಿಗಳು ನಾಲ್ಕು ದಿನ ಕಸ್ಟಡಿಗೆ ಪಡೆದಿದ್ದರು. ಇದೀಗ ಮತ್ತೆ 7 ದಿನ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗುತ್ತದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement