ಪ್ರಚೋದನಾಕಾರಿ ವೀಡಿಯೊ : ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ನಡ್ಡಾ, ವಿಜಯೇಂದ್ರಗೆ ಪೊಲೀಸ್‌ ನೋಟಿಸ್‌

ಬೆಂಗಳೂರು : ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ , .ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರಿಗೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಿಂದ ನೋಟೀಸ್ ಜಾರಿಯಾಗಿದೆ.
ದ್ವೇಷವನ್ನು ಪ್ರಚೋದಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಬೇಕಿರುವುದರಿಂದ ನೊಟೀಸ್ ತಲುಪಿದ 7 ದಿನಗಳ ಒಳಗಾಗಿ ಪ್ರಕರಣದ ತನಿಖಾಧಿಕಾರಿ ಮುಂದೆ ಹಾಜರಾಗಬೇಕು ಎಂದು ನೋಟೀಸ್‌ನಲ್ಲಿ ಸೂಚಿಸಲಾಗಿದೆ.

ಪ್ರಕರಣ ಏನು..?
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳನ್ನು ಮೊಟ್ಟೆಗಳೆಂದು ಬಿಂಬಿಸಿ, ಆ ಮೊಟ್ಟೆಗಳಿರುವ ಬುಟ್ಟಿಗೆ ಮುಸ್ಲಿಂ ಮೊಟ್ಟೆಯನ್ನು ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಂದಿರಿಸಿದ್ದಾರೆ. ಮರಿಯಾವ ಬಳಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮರಿಗಳಿಗೆ ಸೇರಬೇಕಾದ ಅನುದಾನ ಹಾಗೂ ಇತರ ಸೌಲಭ್ಯಗಳನ್ನು ಮುಸ್ಲಿಂ ಮರಿಗಳಿಗೆ ಮಾತ್ರ ನೀಡುತ್ತಾರೆ…” ಎಂಬಂತೆ ಬಿಂಬಿಸುವಂತೆ ತೋರುವ ವೀಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದ ‘ಎಕ್ಸ್‘ ಖಾತೆಯಲ್ಲಿ ಹಂಚಿಕೊಂಡಿದೆ ಎಂದು ಆರೋಪಿಸಲಾಗಿತ್ತು.
ಈ ವೀಡಿಯೊ ಸಮಾಜದಲ್ಲಿ ವಿವಿಧ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡಿ, ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡುವ ರೀತಿಯಲ್ಲಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ, ವೈಮನಸ್ಸನ್ನು ಸೃಷ್ಟಿಸುವ ರೀತಿಯಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ರಮೇಶ ಬಾಬು ಮೇ 5 ರಂದು ಹೈಗ್ರೌಂಡ್ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದರು.

ಪ್ರಮುಖ ಸುದ್ದಿ :-   ಜಾತ್ರಾ ಮಹೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಇಬ್ಬರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement