ರಾಜ್ಯದ ಲೋಕಸಭೆ ಚುನಾವಣೆ 2ನೇ ಹಂತದಲ್ಲಿ ಶೇ.70.03 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ ? ಇಲ್ಲಿದೆ ವಿವರ..

ಬೆಂಗಳೂರು: ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮಂಗಳವಾರ ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಈ ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 70.03 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜನರು ಬಿಸಿಲಿನ ನಡುವೆಯೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ. 14 ಕ್ಷೇತ್ರಗಳಲ್ಲಿ ಒಟ್ಟು 227 ಅಭ್ಯರ್ಥಿಗಳ ಭವಿಷ್ಯ ವಿದ್ಯುನ್ಮಾನ ಮತಯಂತ್ರ ಸೇರಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ರಾಯಚೂರು, ಬೀದರ, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಂಗಳವಾರ ಚುನಾವಣೆ ನಡೆದಿದೆ. 14 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 70.03 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಏಪ್ರಿಲ್‌ ೨೬ರಂದು ನಡೆದ ಮೊದಲ ಹಂತದಲ್ಲಿ 69.56% ಮತದಾನವಾಗಿತ್ತು.

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ..?
ಚಿಕ್ಕೋಡಿ- 76.47%
ಬೆಳಗಾವಿ- 71.00%
ಬಾಗಲಕೋಟೆ- 70.10%
ವಿಜಯಪುರ- 64.71%
ಕಲಬುರಗಿ- 61.73%
ರಾಯಚೂರು- 61.81%
ಬೀದರ-‌ 63.55%
ಕೊಪ್ಪಳ- 69.87%
ಬಳ್ಳಾರಿ- 72.35%
ಹಾವೇರಿ- 74.75%
ಧಾರವಾಡ- 72.12%
ಉತ್ತರ ಕನ್ನಡ- 73.52%
ದಾವಣಗೆರೆ- 76.23%
ಶಿವಮೊಗ್ಗ- 76.05% ರಷ್ಟು ಮತದಾನವಾಗಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 68.81% ಮತದಾನವಾಗಿತ್ತು. ಈ ಚುನಾವಣೆಯಲ್ಲಿ ಅಲ್ಪ ಹೆಚ್ಚಳವಾಗಿದೆ.

ಪ್ರಮುಖ ಸುದ್ದಿ :-   ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ಧ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement